
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ 2023ಕ್ಕೆ ಮತದಾನ ನಡೆಯುತ್ತಿದ್ದು, ಅಭ್ಯರ್ಥಿಗಳಿಂದ ಹಿಡಿದು ಕಾರ್ಯಕರ್ತರವರೆಗೂ ಎಲ್ಲರೂ ಪ್ರಜಾಪ್ರಭುತ್ವದ ಹಬ್ಬದಲ್ಲಿ ಸಡಗರದಿಂದ ಪಾಲ್ಗೊಳ್ಳುತ್ತಿದ್ದಾರೆ.
ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಘಟಾನುಘಟಿ ರಾಜಕೀಯ ನಾಯಕರು ತಮ್ಮ ಮತಹಕ್ಕು ಚಲಾಯಿಸುತ್ತಿದ್ದಾರೆ.
ಶಿಕಾರಿಪುರದಲ್ಲಿ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ ಅವರು ಕುಟುಂಬ ಸಮೇತರಾಗಿ ಇಂದು ತಮ್ಮ ಹಕ್ಕು ಚಲಾಯಿಸಿದರು.
ಇದಕ್ಕೂ ಮುನ್ನ ಕ್ಷೇತ್ರ ಹುಚ್ಚರಾಯ ಸ್ವಾಮಿ ದೇವಸ್ಥಾನಕ್ಕೆ ಕುಟುಂಬ ಸಮೇತ ಪೂಜೆ ಸಲ್ಲಿಸಿದ ಬಿಎಸ್ ಯಡಿಯೂರಪ್ಪ ಅವರು ಎಲ್ಲರು ತಪ್ಪದೇ ಮತದಾನ ಮಾಡುವಂತೆ ಕೋರಿದರು.
ಈ ಬಾರಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಬಿಎಸ್ ಯಡಿಯೂರಪ್ಪನವರ ಮಗ ಬಿವೈ ವಿಜಯೇಂದ್ರ ಅವರು ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ.
ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ, ನಾರಾಯಣ ಮೂರ್ತಿ, ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಅಶ್ವತ್ಥ್ ನಾರಾಯಣ್, ಆರ್.ಅಶೋಕ್, ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವ ಡಾ.ಕೆ.ಸುಧಾಕರ್, ಸಿಎಂ ಬೊಮ್ಮಾಯಿ, ಕಾಂಗ್ರೆಸ್ ನಾಯಕ ಈಶ್ವರ್ ಖಂಡ್ರೆ ಸೇರಿದಂತೆ ಹಲವು ಗಣ್ಯರು ಇಂದು ಮತಚಲಾಯಿಸಿದರು.
Advertisement