ರಾಜ್ಯ ವಿಧಾನಸಭೆ ಚುನಾವಣೆ: 10 ಗಂಟೆವರೆಗೂ ನಡೆದ ಮತದಾನ ಪ್ರಕ್ರಿಯೆ; ಶೇ. 72ರಷ್ಟು ಮತಚಲಾವಣೆ!

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದ್ದ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದ್ದು ಶೇ 72ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದ್ದ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದ್ದು ಶೇ 72ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

ಸಂಜೆಯಾಗುತ್ತಲೇ ರಾಜ್ಯದ ಬಹುತೇಕ ಮತಗಟ್ಟೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಆಗಮಿಸಿದ್ದರಿಂದ ಮತದಾನದ ಗಡುವನ್ನು ಮೀರಿ ಮತ ಚಲಾವಣೆಗೆ ಅವಕಾಶ ನೀಡಲಾಗಿತ್ತು. ಹೀಗಾಗಿ ರಾಜ್ಯದ ಹಲವು ಕಡೆ 10 ಗಂಟೆಯವರೆಗೂ ಮತದಾನ ಪ್ರಕ್ರಿಯೆ ನಡೆದಿದೆ ಎಂದು ವರದಿಯಾಗಿದೆ. ರಾತ್ರಿ 10 ಗಂಟೆಗೆ ಲಭ್ಯವಾದ ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ಶೇ.71.77ರಷ್ಟು ಮತದಾನವಾಗಿದೆ. ಇನ್ನು ಗುರುವಾರ ಅಂತಿಮ ಅಂಕಿ ಅಂಶಗಳನ್ನು ಚುನಾವಣಾ ಆಯೋಗ ತಿಳಿಸಿದೆ.

224 ಸದಸ್ಯ ಬಲದ ವಿಧಾನಸಭೆಯ ಮತ ಎಣಿಕೆ ಮೇ 13ರಂದು ನಡೆಯಲಿದ್ದು ರಾಜ್ಯದಾದ್ಯಂತ 58,545 ಮತಗಟ್ಟೆಗಳಲ್ಲಿ ಒಟ್ಟು 5.31 ಕೋಟಿ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದು, 2,615 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಕರ್ನಾಟಕದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಶಾಂತಿಯುತ ಮತದಾನವಾಗಿದೆ. 58,545 ಮತಗಟ್ಟೆಗಳಲ್ಲಿ ಯಾವುದೇ ಮರುಮತದಾನಕ್ಕೆ ಸೂಚಿಸಲಾಗಿಲ್ಲ ಎಂದು ಚುನಾವಣಾ ಆಯೋಗ (EC) ತಿಳಿಸಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕವು ಶೇಕಡಾ 72.36 ರಷ್ಟು ಮತದಾನವನ್ನು ದಾಖಲಿಸಿತ್ತು. ಅಂದು 104 ಸ್ಥಾನಗಳೊಂದಿಗೆ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಕೆಲವು ಸಮೀಕ್ಷೆಗಳ ಪ್ರಕಾರ ಈ ಬಾರಿಯೂ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಲಿದ್ದರೆ ಇನ್ನು ಐದು ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಗೆ ಬಹುಮತ ಸಿಕ್ಕರೆ ಎರಡು ಸಮೀಕ್ಷೆಗಳಲ್ಲಿ ಬಿಜೆಪಿಗೆ ಬಹುಮತ ಸಿಗಲಿದೆ ಎಂದು ತಿಳಿಸಿವೆ.

ಚುನಾವಣೋತ್ತರ ಸಮೀಕ್ಷೆಗಳ ಪಟ್ಟಿ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com