ರಾಜ್ಯದಲ್ಲಿ ಚುನಾವಣೋತ್ತರ ಹಿಂಸಾಚಾರ: ಮಂಗಳೂರಿನಲ್ಲಿ ಕೈ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ

ವಿಧಾನಸಭಾ ಚುನಾವಣೆಯ ಮತದಾನ ಮುಗಿದ್ದ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದೆ.
ಮಿಥುನ್ ರೈ
ಮಿಥುನ್ ರೈ

ಮಂಗಳೂರು: ವಿಧಾನಸಭಾ ಚುನಾವಣೆಯ ಮತದಾನ ಮುಗಿದ್ದ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದೆ.

ರಾಜ್ಯದ ಹಲವೆಡೆ ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ, ಕಲ್ಲು ತೂರಾಟ ನಡೆದಿದೆ. ಈ ನಡುವೆ ನಗರ ಹೊರವಲಯದ ಮೂಡುಶೆಡ್ಡೆ ಬಳಿ ಬುಧವಾರ ರಾತ್ರಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ಮೂಲ್ಕಿ ಮೂಡಬಿದರೆ ಕಾಂಗ್ರೆಸ್ ಆಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಇಬ್ಬರು ಪೊಲೀಸ್‌ ಸಿಬ್ಬಂದಿಗೆ ಗಾಯಗಳಾಗಿವೆ.

ಮಿಥುನ್ ರೈ ಬೂತ್ ಗೆ ಬಂದಾಗ ಕಾಂಗ್ರೆಸ್ ಕಾರ್ಯಕರ್ತರು ಜೈಕಾರ ಕೂಗಿದ್ದಾರೆ. ಈ ವೇಳೆ ಎರಡು ಪಕ್ಷದ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದು ಗಲಾಟೆ ಶುರುವಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದರಿಂದ ಸ್ಥಳಕ್ಕೆ‌ ಪೊಲೀಸರು ಧಾವಿಸಿ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಟ್ಟರು. ಈ ವೇಳೆ ಡಿಸಿಪಿ ಕಾರಿನ ಮೇಲೆ ಕೂಡ ಕಲ್ಲು ತೂರಾಟ ನಡೆಸಲಾಗಿದೆ. ಭದ್ರತೆಗಾಗಿ ಸ್ಥಳದಲ್ಲಿ ಕೆಎಸ್ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com