ಸಮೀಕ್ಷೆಗಳಂತೆ 130 ಸೀಟ್ ಗಳೊಂದಿಗೆ ಕಾಂಗ್ರೆಸ್ ಗೆ ಬಹುಮತ: ಸಿದ್ದರಾಮಯ್ಯ

ಚುನಾವಣೋತ್ತರದ ಹಲವು ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಗೆ ಬಹುಮತ ಸಿಗುವುದು ಬಹುತೇಕ ಪಕ್ಕ. 130 ಸೀಟ್ ಗಳೊಂದಿಗೆ ನಾವು ಸರ್ಕಾರ ರಚಿಸುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಮೈಸೂರು: ಚುನಾವಣೋತ್ತರದ ಹಲವು ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಗೆ ಬಹುಮತ ಸಿಗುವುದು ಬಹುತೇಕ ಪಕ್ಕ. 130 ಸೀಟ್ ಗಳೊಂದಿಗೆ ನಾವು ಸರ್ಕಾರ ರಚಿಸುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸರ್ಕಾರದ ವಿರುದ್ಧ ಜನಮತವಿದೆ. ನಾನು ಜನರ ನಾಡಿಮಿಡಿತ ಅರ್ಥಮಾಡಿಕೊಂಡಿರುವುದು ಸರಿಯಿದೆ. ನಾವು ಏನು ಫಲಿತಾಂಶದ ನಿರೀಕ್ಷೆ ಮಾಡಿದ್ದೆವೋ ಅದೇ ಫಲಿತಾಂಶ ಬರಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚುನಾವಣೋತ್ತರ ಸಮೀಕ್ಷೆಗಳ ನಂತರ ಮಾತನಾಡಿದ ಸಿದ್ದರಾಮಯ್ಯ, ಈ ಬಾರಿ ಕರಾವಳಿ ಭಾಗದಲ್ಲೂ ನಮ್ಮ ಸೀಟು ಹೆಚ್ಚಾಗಲಿದೆ. ಬಜರಂಗದಳ ವಿಚಾರ ಒಂದು ವಿವಾದದ ವಿಚಾರವೇ ಅಲ್ಲ. ನಾವು ನಮ್ಮ ಪ್ರಣಾಳಿಕೆಯಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇವೆ. ಬಿಜೆಪಿಯವರು ಅದನ್ನು ಅಪಪ್ರಚಾರ ಮಾಡಿದರು. ಲಿಂಗಾಯತ ನಾಯಕರೆಲ್ಲಾ ಭ್ರಷ್ಟಾಚಾರಿಗಳು ಅಂತ ನಾನೆಲ್ಲಿ ಹೇಳಿದ್ದೆ? ನಾನು ಬಸವರಾಜ ಬೊಮ್ಮಾಯಿ ಭ್ರಷ್ಟಾಚಾರಿ ಅಂತ ಹೇಳಿದ್ದೆ. ನನ್ನ ಮಾತನ್ನು ತಿರುಚಿ ಅಪಪ್ರಚಾರ ಮಾಡಿದರು ಎಂದು ಸಿದ್ದರಾಮಯ್ಯ ಹೇಳಿದರು.

ಇನ್ನು ವರುಣಾದಲ್ಲಿ ನಾನು ಬಹಳ ಸುಲಭವಾಗಿ ಗೆಲುವು ಸಾಧಿಸುತ್ತೇನೆ. ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಪೈಪೋಟಿಯಿದ್ದು ಇಲ್ಲಿ ಬಿಜೆಪಿಗೆ ಅಸ್ತಿತ್ವವಿಲ್ಲ ಎಂದರು. ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅವರಿಗೆ ವರುಣಾದ ಜನ ಯಾಕೆ ವೋಟ್ ಹಾಕಬೇಕು? ಕ್ಷೇತ್ರಕ್ಕೆ ಅವರ ಕೊಡುಗೆ ಏನು? ಅವರು ಜಾತಿ ಕಾರ್ಡ್ ಪ್ಲೇ ಮಾಡಿದ್ದಾರೆ. ಅದು ಬಿಟ್ಟರೆ ದುಡ್ಡಿನ ರಾಜಕೀಯ ಮಾಡಿದ್ದಾರೆ ಎಂದರು. 

ರಾಜ್ಯದಲ್ಲಿ ಮತ್ತೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗುತ್ತದೆಯೇ ಎಂಬ ಪ್ರಶ್ನೆಗೆ ಗರಂ ಆದ ಸಿದ್ದರಾಮಯ್ಯ, ಎಲ್ಲಾ ಸಮೀಕ್ಷೆಗಳಲ್ಲೂ ಬಹುಮತ ಸಿಗುತ್ತದೆ ಎಂದು ಬರುತ್ತಿದೆ. ಹೀಗಿರುವಾಗ ಶಾಸಕರ ರಕ್ಷಣೆ ಎಲ್ಲಿಂದ ಬರುತ್ತೆ? ಯಾಕೆ ಇಂತಹ ಪ್ರಶ್ನೆ ಕೇಳಿ ಸುದ್ದಿ ಹಬ್ಬಿಸುತ್ತೀರಾ? ಎಂದು ಗರಂ ಆದರು. ಅಲ್ಲದೆ ನಾವು ಬಹುಮತದೊಂದಿಗೆ ಸರ್ಕಾರ ಮಾಡುತ್ತೇವೆ. ಇಂತಹ ಪ್ರಶ್ನೆಗಳನ್ನು ಕೇಳಿ ಗೊಂದಲದ ಸುದ್ದಿಗಳನ್ನು ಹಬ್ಬಿಸಬೇಡಿ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com