ಎಲ್ಲಾ ಎಕ್ಸಿಟ್ ಪೋಲ್‌ಗಳು ಸುಳ್ಳಾಗುತ್ತವೆ: ಬಿಜೆಪಿ ನಾಯಕ ಬಿಎಲ್ ಸಂತೋಷ್

ಎಲ್ಲಾ ಎಕ್ಸಿಟ್ ಪೋಲ್‌ಗಳು ಸುಳ್ಳಾಗುತ್ತವೆ. ಈ ಹಿಂದೆಯೂ ಅವು ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಊಹಿಸಿರಲಿಲ್ಲ ಎಂದು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಗುರುವಾರ ಹೇಳಿದ್ದಾರೆ.
ಬಿ.ಎಲ್ ಸಂತೋಷ್
ಬಿ.ಎಲ್ ಸಂತೋಷ್

ಬೆಂಗಳೂರು: ಎಲ್ಲಾ ಎಕ್ಸಿಟ್ ಪೋಲ್‌ಗಳು ಸುಳ್ಳಾಗುತ್ತವೆ. ಈ ಹಿಂದೆಯೂ ಅವು ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಊಹಿಸಿರಲಿಲ್ಲ ಎಂದು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಗುರುವಾರ ಹೇಳಿದ್ದಾರೆ.

ಬಿಜೆಪಿಯು 2014 ರಲ್ಲಿ 282 ಅಥವಾ 2019 ರಲ್ಲಿ 303 ಅಥವಾ 2022 ರಲ್ಲಿ 156 ಅಥವಾ 2018 ರಲ್ಲಿ 104 ಎಂದು ಯಾವ ಸಮೀಕ್ಷೆಗಳು ಭವಿಷ್ಯ ನುಡಿದಿರಲಿಲ್ಲ ಎಂದಿದ್ದಾರೆ.

'2018 ರಲ್ಲಿ ಕರ್ನಾಟಕದಲ್ಲಿ ಬಿಜೆಪಿ 14 ವಿಧಾನಸಭಾ ಕ್ಷೇತ್ರಗಳಲ್ಲಿ ಹಿನ್ನೆಡೆಯೊಂದಿಗೆ 24,000 ಬೂತ್‌ಗಳಲ್ಲಿ ಮುನ್ನಡೆ ಸಾಧಿಸಿತ್ತು. ಈ ಬಾರಿ ನಾವು 31,000 ಬೂತ್‌ಗಳಲ್ಲಿ ಮುನ್ನಡೆ ಸಾಧಿಸಿದ್ದೇವೆ ಮತ್ತು ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ್ದೇವೆ. ನೀವು ನೀಡಿರುವ ಸಂಖ್ಯೆಗಳು ಕೇವಲ ನಿಮ್ಮ ಊಹೆಯಷ್ಟೇ' ಎಂದು ಸಂತೋಷ್ ಹೇಳಿದರು.

ಈಮಧ್ಯೆ, ತಮ್ಮ ತಮ್ಮ ಕ್ಷೇತ್ರಗಳಲ್ಲಿರುವ ಎಲ್ಲಾ ನಾಯಕರು ಮೇ 13 ರಂದು ಚುನಾವಣಾ ಫಲಿತಾಂಶ ಪ್ರಕಟವಾಗುವ ದಿನ ಬೆಂಗಳೂರಿಗೆ ತೆರಳುತ್ತಿದ್ದಾರೆ.

ಎಕ್ಸಿಟ್ ಪೋಲ್‌ಗಳು ಅತಂತ್ರ ವಿಧಾನಸಭೆಯ ಭವಿಷ್ಯ ನುಡಿದಿದ್ದು, ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರಚಾರದ ಹೊರತಾಗಿಯೂ ಆಡಳಿತಾರೂಢ ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದೆ ಎಂದು ಸೂಚಿಸಿವೆ.

ಚುನಾವಣೆ ಮುಗಿಸಿ ಟೆಂಪಲ್ ರನ್ ಮಾಡುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿಗೆ ವಾಪಸಾಗುತ್ತಿದ್ದಾರೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕೂಡ ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆಯುವ ಸಭೆಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com