ದಕ್ಷಿಣ ಆಫ್ರಿಕಾದಲ್ಲಿ ಬಳಸಿದ್ದ ಇವಿಎಂಗಳನ್ನು ಕರ್ನಾಟಕ ಚುನಾವಣೆಯಲ್ಲಿ ಬಳಸಿಲ್ಲ: ಆಯೋಗ

ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಮೇ 13ರಂದು ಹೊರಬೀಳಲಿದೆ. ಆದರೆ ಅದಕ್ಕೂ ಮುನ್ನ ಚುನಾವಣಾ ಆಯೋಗ ಇವಿಎಂ ಯಂತ್ರದ ಬಗ್ಗೆ ಕಾಂಗ್ರೆಸ್‌ ಮಾಡಿದ್ದ ಆರೋಪವನ್ನು ತಿರಸ್ಕರಿಸಿದೆ.
ಇವಿಎಂ
ಇವಿಎಂ
Updated on

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಮೇ 13ರಂದು ಹೊರಬೀಳಲಿದೆ. ಆದರೆ ಅದಕ್ಕೂ ಮುನ್ನ ಚುನಾವಣಾ ಆಯೋಗ ಇವಿಎಂ ಯಂತ್ರದ ಬಗ್ಗೆ ಕಾಂಗ್ರೆಸ್‌ ಮಾಡಿದ್ದ ಆರೋಪವನ್ನು ತಿರಸ್ಕರಿಸಿದೆ. 

ವಾಸ್ತವವಾಗಿ, ಕರ್ನಾಟಕದಲ್ಲಿ ಮತದಾನಕ್ಕೆ ಚುನಾವಣಾ ಆಯೋಗವು ಬಳಸುತ್ತಿದ್ದ ಇವಿಎಂ ಯಂತ್ರಗಳನ್ನು ಮೊದಲು ದಕ್ಷಿಣ ಆಫ್ರಿಕಾದಲ್ಲಿ ಬಳಸಲಾಗಿತ್ತು ಎಂದು ಕಾಂಗ್ರೆಸ್ ಆರೋಪಿಸಿತ್ತು. ಕಾಂಗ್ರೆಸ್‌ನ ಈ ಹೇಳಿಕೆಯನ್ನು ತಿರಸ್ಕರಿಸಿರುವ ಚುನಾವಣಾ ಆಯೋಗವು, ಇಂತಹ ಸುಳ್ಳು ಮಾಹಿತಿಗಳನ್ನು ಹರಡುವ ತನ್ನ ಮೂಲಗಳನ್ನು ಕಾಂಗ್ರೆಸ್ ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಎಂದು ಹೇಳಿದೆ.

ಚುನಾವಣಾ ಆಯೋಗಕ್ಕೆ ಪತ್ರ ಬರೆದ ಕಾಂಗ್ರೆಸ್
ಮೇ 8ರಂದು ಚುನಾವಣಾ ಆಯೋಗಕ್ಕೆ ಬರೆದ ಪತ್ರದಲ್ಲಿ ಕಾಂಗ್ರೆಸ್ ಇವಿಎಂ ಯಂತ್ರಗಳ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು. ಈ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಬಳಸಿದ ಇವಿಎಂಗಳನ್ನು ಕರ್ನಾಟಕ ಚುನಾವಣೆಯಲ್ಲಿ ಮರುಮೌಲ್ಯಮಾಪನ ಮತ್ತು ಮರುಪರಿಶೀಲನೆಯ ಪ್ರಕ್ರಿಯೆಗೆ ಒಳಪಡಿಸದೆ ಮರುಬಳಕೆ ಮಾಡಲಾಗುತ್ತಿದೆಯೇ ಎಂದು ಕಾಂಗ್ರೆಸ್ ಪತ್ರದಲ್ಲಿ ವಿವರಣೆ ಕೇಳಿತ್ತು. ಈ ಯಂತ್ರಗಳನ್ನು ಕರ್ನಾಟಕ ಚುನಾವಣೆಯಲ್ಲಿ ಭಾರತೀಯ ಷರತ್ತುಗಳಿಗೆ ಅನುಗುಣವಾಗಿ ಪರಿಶೀಲನೆ ಪ್ರಕ್ರಿಯೆಗೆ ಒಳಪಡಿಸದೆ ಬಳಸಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಈ ಆರೋಪ ಕುರಿತು ಆಯೋಗವು ಕಾಂಗ್ರೆಸ್‌ನಿಂದ ಮಾಹಿತಿ ಕೇಳಿತ್ತು.

ರಣದೀಪ್ ಸುರ್ಜೇವಾಲಾಗೆ ಪತ್ರ ಬರೆದಿದ್ದ ಚುನಾವಣಾ ಆಯೋಗ
ಪಕ್ಷದ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಬರೆದ ಪತ್ರದಲ್ಲಿ ಕಾಂಗ್ರೆಸ್ ನ ಆರೋಪವನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ. ಕಾಂಗ್ರೆಸ್‌ನ ಆರೋಪಗಳನ್ನು ನಿರಾಕರಿಸಿರುವ ಆಯೋಗ, ಇವಿಎಂಗಳನ್ನು ದಕ್ಷಿಣ ಆಫ್ರಿಕಾಕ್ಕೆ ಕಳುಹಿಸಲಾಗಿಲ್ಲ ಅಥವಾ ಆ ದೇಶವು ಇವಿಎಂಗಳನ್ನು ಬಳಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಕರ್ನಾಟಕ ಚುನಾವಣೆಯಲ್ಲಿ ಹೊಸ ECIL ತಯಾರಿಸಿದ ಇವಿಎಂಗಳನ್ನು ಮಾತ್ರ ಬಳಸಲಾಗುವುದು ಎಂದು ಗೊತ್ತಿದ್ದೂ ಕಾಂಗ್ರೆಸ್ ಇಂತಹ ತಪ್ಪು ಆರೋಪಗಳನ್ನು ಮಾಡಿದೆ ಎಂದು ಆಯೋಗ ಹೇಳಿದೆ.

ಆರೋಪದ ಮೂಲ ಬಹಿರಂಗಪಡಿಸುವಂತೆ ಕಾಂಗ್ರೆಸ್ ಗೆ ಸವಾಲು
ಇಂತಹ ಗಂಭೀರ ಆರೋಪಗಳನ್ನು ಪಕ್ಷವು ಯಾವ ಆಧಾರದ ಮೇಲೆ ಹರಡಿದೆ ಎಂಬ ಮಾಹಿತಿಯನ್ನು ಸಾರ್ವಜನಿಕಗೊಳಿಸಬೇಕು. ಇದರ ವಿರುದ್ದ ತಾವು ತೆಗೆದುಕೊಂಡ ಕ್ರಮವನ್ನು ತಿಳಿಸಬೇಕು ಎಂದು ಆಯೋಗ ಹೇಳಿದೆ. ಮೇ 15ರಂದು ಸಂಜೆ 5 ಗಂಟೆಯೊಳಗೆ ಕಾಂಗ್ರೆಸ್ ಉತ್ತರಿಸಬೇಕು. ಅಲ್ಲದೆ ತಾವು ತೆಗೆದುಕೊಂಡ ಕ್ರಮವನ್ನು ಖಚಿತಪಡಿಸಬೇಕು ಎಂದು ಆಯೋಗ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com