ಶಿಗ್ಗಾಂವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸಿರುವ ಶಿಗ್ಗಾಂವಿ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ನಡೆಸುತ್ತಿದ್ದ ಸಂದರ್ಭದಲ್ಲಿಯೇ ಬಿಜೆಪಿ ಕಚೇರಿಯಲ್ಲಿ ನಾಗರಹಾವೊಂದು ಕಾಣಿಸಿಕೊಂಡಿದ್ದು, ಈ ವೇಳೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಬೊಮ್ಮಾಯಿಯವರು ಬಿಜೆಪಿಗೆ ಕಚೇರಿಗೆ ಆಗಮಿಸುತ್ತಿದ್ದ ಸಂದರ್ಭದಲ್ಲಿಯೇ ಹಾವು ಕಾಣಿಸಿಕೊಂಡಿದೆ. ಈ ವೇಳೆ ಅಲರ್ಟ್ ಆದ ಸಿಬ್ಬಂದಿಗಳು ಮುಖ್ಯಮಂತ್ರಿಗಳು ಮುಂದೆ ಹೋಗದಂತೆ ತಡೆದಿದ್ದಾರೆ. ಬಳಿಕ ಹಾವನ್ನು ರಕ್ಷಣೆ ಮಾಡಿ, ಕಚೇರಿಯಿಂದ ದೂರ ಬಿಟ್ಟಿದ್ದಾರೆ.
ಈ ಬಾರಿಯೂ ಬಿಜೆಪಿ ಸರ್ಕಾರ ರಚಿಸುವ ಇಂಗಿತ ವ್ಯಕ್ತಪಡಿಸಿದ್ದ ಬೊಮ್ಮಾಯಿ ಅವರು, ಶಿಗ್ಗಾಂವಿ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಬಹುತೇಕ ಖಚಿತಗೊಂಡಿದೆ ಆದರೂ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನಗಳನ್ನು ಗಳಿಸುವತ್ತ ಹೆಜ್ಜೆ ಇರಿಸಿದೆ.
Advertisement