ತಳವಾರ್ ಝಳಪಿಸಿದ ಯತ್ನಾಳ್ ಬೆಂಬಲಿಗ, ಬೆಳಗಾವಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ: ಕೇಸು ದಾಖಲಿಸಿ ಆರೋಪಿಗಳ ಬಂಧನ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆಲುವು ಸಾಧಿಸಿದ ಸಂತೋಷದಲ್ಲಿ ಬಿಜೆಪಿ ಕಾರ್ಯಕರ್ತನೋರ್ವ ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ ಮಾಡಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಮತ್ತು ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು.
ಕತ್ತಿ ಝಳಪಿಸುತ್ತಾ ಸಾಗಿದ ಯತ್ನಾಳ್ ಬೆಂಬಲಿಗ
ಕತ್ತಿ ಝಳಪಿಸುತ್ತಾ ಸಾಗಿದ ಯತ್ನಾಳ್ ಬೆಂಬಲಿಗ
Updated on

ವಿಜಯಪುರ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆಲುವು ಸಾಧಿಸಿದ ಸಂತೋಷದಲ್ಲಿ ಬಿಜೆಪಿ ಕಾರ್ಯಕರ್ತನೋರ್ವ ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ ಮಾಡಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಮತ್ತು ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು.

ವಿಜಯನಗರ ಮತ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಚುನಾವಣೆಯಲ್ಲಿ ಗೆಲ್ಲುತ್ತಿದ್ದಂತೆ ಖಡ್ಗವನ್ನು ಸಾರ್ವಜನಿಕವಾಗಿ ಝಳಪಿಸುತ್ತಾ ಬಂದ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚು ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ.

ಇನ್ನು ನಿನ್ನೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತಿದ್ದಂತೆ ಬೆಳಗಾವಿಯ ಆರ್.ಪಿ.ಡಿ ವೃತ್ತದ ಬಳಿ ಪಾಕಿಸ್ತಾನ ಜಿಂದಾಬಾದ್ ಅಂತಾ ಘೋಷಣೆ ಕೂಗಿದ ದೇಶದ್ರೋಹಿಗಳ ವಿರುದ್ಧ ಕೇಸು ದಾಖಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಸಹ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com