ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ

ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡು ಕಾಂಗ್ರೆಸ್ ಗೆ ಬಹುಮತ ಸಿಗುತ್ತಿದ್ದಂತೆ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ ನೀಡಿದ್ದಾರೆ. 
ಪ್ರಭುಲಿಂಗ ನಾವದಗಿ
ಪ್ರಭುಲಿಂಗ ನಾವದಗಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡು ಕಾಂಗ್ರೆಸ್ ಗೆ ಬಹುಮತ ಸಿಗುತ್ತಿದ್ದಂತೆ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ ನೀಡಿದ್ದಾರೆ. 

ಇಂದು ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ನಾವದಗಿ ರಾಜೀನಾಮೆ ನೀಡಿದರು. 2018ರ ಮೇ 18ರಂದು ನಾವದಗಿ ಅವರು ರಾಜ್ಯದ ಅಡ್ವೋಕೇಟ್ ಜನರಲ್ ಆಗಿ ನೇಮಕಗೊಂಡಿದ್ದರು. 

2018ಕ್ಕೂ ಮುನ್ನ ಮಧುಸೂದನ್ ನಾಯಕ್ ಅವರು ಅಡ್ವೋಕೇಟ್ ಜನರಲ್ ಆಗಿದ್ದರು. ಅ ನಂತರ 2019ರಲ್ಲಿ ಜೆಡಿಎಸ್ ಕಾಂಗ್ರೆಸ್ ಸರ್ಕಾರದಲ್ಲಿ ಉದಯ್ ಹೊಳ್ಳ ಅವರು ಅಡ್ವೋಕೇಟ್ ಜನರಲ್ ಆಗಿದ್ದರು. ಈ ಸಮಿಶ್ರ ಸರ್ಕಾರ ಪತನಗೊಂಡ ನಂತರ ಉದಯ್ ಹೊಳ್ಳ ರಾಜೀನಾಮೆ ನೀಡಿದ್ದರು.

2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 135 ಸ್ಥಾನ ಗಳಿಸಿ ಭರ್ಜರಿ ಬಹುಮತ ಪಡೆದಿದೆ. ಬಿಜೆಪಿ 66 ಹಾಗೂ ಜೆಡಿಎಸ್ 19 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿವೆ. ಇತರರು ಮೂರು ಕಡೆ ಗೆಲುವು ಸಾಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com