ಸಿದ್ದರಾಮಯ್ಯ ಪಟ್ಟಾಭಿಷೇಕಕ್ಕೆ ಹೈಕಮಾಂಡ್ ಸಮ್ಮತಿ, ಕಂಠೀರವ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆ: ವರದಿಗಳು

ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯ ಹೆಸರನ್ನು ಅಧಿಕೃತವಾಗಿ ಘೋಷಿಸುವ ಮುನ್ನವೇ ಸಿದ್ದರಾಮಯ್ಯ ಬೆಂಬಲಿಗರು ಸಂಭ್ರಮಾಚರಣೆ ಆರಂಭಿಸಿದ್ದು, ಬೆಂಗಳೂರಿನಲ್ಲಿರುವ ಅವರ ನಿವಾಸದ ಮುಂದೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅಭಿಮಾನಿಗಳಿಂದ ಸಂಭ್ರಮಾಚರಣೆ
ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅಭಿಮಾನಿಗಳಿಂದ ಸಂಭ್ರಮಾಚರಣೆ

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯ ಹೆಸರನ್ನು ಅಧಿಕೃತವಾಗಿ ಘೋಷಿಸುವ ಮುನ್ನವೇ ಸಿದ್ದರಾಮಯ್ಯ ಬೆಂಬಲಿಗರು ಸಂಭ್ರಮಾಚರಣೆ ಆರಂಭಿಸಿದ್ದು, ಬೆಂಗಳೂರಿನಲ್ಲಿರುವ ಅವರ ನಿವಾಸದ ಮುಂದೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ನಾಳೆ ಗುರುವಾರ ಅಪರಾಹ್ನ 3.30ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.

ದೆಹಲಿಯ 10 ಜನಪಥ್‌ನಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರೊಂದಿಗೆ ಸಭೆ ನಡೆಸಿದ್ದು, ಕರ್ನಾಟಕದ ಮುಂದಿನ ಸಿಎಂ ಕುರಿತು ಇಂದು ಅಪರಾಹ್ನ ಅಧಿಕೃತ ಘೋಷಣೆ ಹೊರಬೀಳಲಿದೆ.

ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮಾಧ್ಯಮ ಪ್ರತಿನಿಧಿಗಳಿಗೆ ಖಚಿತಪಡಿಸಿದ್ದಾರೆ. 

ಈ ಮಧ್ಯೆ, ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಬೆಂಬಲಿಗರು ಸಂಭ್ರಮಾಚರಣೆ ಆರಂಭಿಸಿದ್ದು, ಕುಮಾರ ಕೃಪಾ ರಸ್ತೆಯಲ್ಲಿರುವ ಅವರ ನಿವಾಸದ ಮುಂದೆ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ. ಕೆಎಸ್ ಆರ್ ಪಿ ತುಕಡಿ ಹಾಗೂ 70ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಕಂಠೀರವ ಕ್ರೀಡಾಂಗಣದಲ್ಲಿ ಸಕಲ ಸಿದ್ದತೆ: ನಾಳೆ ಅಪರಾಹ್ನ ಮುಖ್ಯಮಂತ್ರಿಗಳಾಗಿ ಸಿದ್ದರಾಮಯ್ಯನವರು ಮತ್ತು ಉಪ ಮುಖ್ಯಮಂತ್ರಿಗಳಾಗಿ ಡಿ ಕೆ ಶಿವಕುಮಾರ್ ಅವರು ನಾಳೆ ಅಪರಾಹ್ನ 3.30ಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಇದಕ್ಕೆ ವ್ಯಾಪಕ ಸಿದ್ಧತೆ ಈಗಾಗಲೇ ಆರಂಭವಾಗಿದೆ. ಉನ್ನತ ಪೊಲೀಸ್ ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿ ಸಿದ್ಧತೆ ಪರಿಶೀಲಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com