ಸಿಎಂ ಆಯ್ಕೆ ಮಧ್ಯೆ ಹೆಚ್ಚಿದ ಡಿಸಿಎಂ ಕೂಗು, ಶುರುವಾಯ್ತು ಪೈಪೋಟಿ: ಸತೀಶ್ ಜಾರಕಿಹೊಳಿಗೆ ಸ್ಥಾನ ನೀಡುವಂತೆ ಹಲವರು ಒತ್ತಾಯ

ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಸಂಪೂರ್ಣ ಬಹುಮತ ಪಡೆದಿರುವ ಕಾಂಗ್ರೆಸ್ ಅಧಿಕಾರ ಚುಕ್ಕಾಣಿ ಹಿಡಿಯಲು ಸಿದ್ಧಗೊಂಡಿದೆ. ಅಧಿಕಾರಕ್ಕೇರುವ ಕಾಂಗ್ರೆಸ್ ಪಕ್ಷಕ್ಕೆ ಸಿಎಂ ಆಯ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಈ ನಡುವಲ್ಲೇ ಉಪ ಮುಖ್ಯಮಂತ್ರಿ ಸ್ಥಾನಕ್ಕೂ ಪೈಪೋಟಿ ಶುರುವಾಗಿದೆ.
ಸತೀಶ್ ಜಾರಕಿಹೊಳಿ.
ಸತೀಶ್ ಜಾರಕಿಹೊಳಿ.
Updated on

ಬೆಳಗಾವಿ: ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಸಂಪೂರ್ಣ ಬಹುಮತ ಪಡೆದಿರುವ ಕಾಂಗ್ರೆಸ್ ಅಧಿಕಾರ ಚುಕ್ಕಾಣಿ ಹಿಡಿಯಲು ಸಿದ್ಧಗೊಂಡಿದೆ. ಅಧಿಕಾರಕ್ಕೇರುವ ಕಾಂಗ್ರೆಸ್ ಪಕ್ಷಕ್ಕೆ ಸಿಎಂ ಆಯ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಈ ನಡುವಲ್ಲೇ ಉಪ ಮುಖ್ಯಮಂತ್ರಿ ಸ್ಥಾನಕ್ಕೂ ಪೈಪೋಟಿ ಶುರುವಾಗಿದೆ.

ಬೆಳಗಾವಿ ಜಿಲ್ಲಾ ಮೀಸಲಾತಿ ಅಡಿಯಲ್ಲಿ ಶಾಸಕರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಲಕ್ಷ್ಮಣ ಸವದಿ ಅವರನ್ನು ರಾಜ್ಯ ಸಚಿವ ಸಂಪುಟಕ್ಕೆ ಕಾಂಗ್ರೆಸ್ ನಾಯಕತ್ವ ಸೇರ್ಪಡೆ ಮಾಡಲಿದೆ ಎಂಬ ಊಹಾಪೋಹಗಳ ಶುರುವಾಗಿದ್ದು, ಈ ನಡುವೆಯೇ ರಾಜ್ಯದ ವಿವಿಧೆಡೆಯ ಹಲವು ಶಾಸಕರು ಜಾರಕಿಹೊಳಿ ಅವರನ್ನು ಡಿಸಿಎಂ ಮಾಡಬೇಕೆಂದು ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ.

ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಾಸಕ ಆಸೀಫ್ ಸೇಠ್ ಅವರು, ಸತೀಶ್ ಜಾರಕಿಹೊಳಿ ಅವರನ್ನು ಡಿಸಿಎಂ ಆಗಿ ನೇಮಿಸುವಂತೆ ಪಕ್ಷದ ನಾಯಕರಿಗೆ ಒತ್ತಾಯಿಸಿದರು. ಯಾರನ್ನು ಸಂಪುಟದಲ್ಲಿರಿಸಬೇಕು ಎಂಬುದರ ಕುರಿತು ಅಂತಿಮ ತೀರ್ಮಾನವನ್ನು ಪಕ್ಷದ ಹೈಕಮಾಂಡ್‌ ಕೈಗೊಳ್ಳಲಿದೆ ಎಂದು ಹೇಳಿದರು.

ಜಾರಕಿಹೊಳಿ, ಹೆಬ್ಬಾಳ್ಕರ್ ಮತ್ತು ಸವದಿ ಅವರು ಇತ್ತೀಚಿನ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮೂವರು ಶಾಸಕರೂ ಯಮಕನಮರಡಿ, ಬೆಳಗಾವಿ ಗ್ರಾಮಾಂತರ ಮತ್ತು ಅಥಣಿ ಕ್ಷೇತ್ರಗಳಲ್ಲಿ ತಮ್ಮ ಪ್ರತಿಸ್ಪರ್ಧಿಗಳ ವಿರುದ್ಧ 50 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಲಿಂಗಾಯತ ಬಹುಸಂಖ್ಯಾತ ಪ್ರದೇಶಗಳಲ್ಲಿ ಸವದಿ ಅವರಿಗೆ ಭಾರಿ ಜನಪ್ರಿಯತೆಯನ್ನು ಗಳಿಸಿದ್ದು, ಹೀಗಾಗಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಪಕ್ಷವು ಉತ್ಸುಕವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಅವರ ನಿಕಟವರ್ತಿ ಹೆಬ್ಬಾಳ್ಕರ್ ಅವರು ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಸ್ಥಾನವನ್ನು ಹೊಂದಿದ್ದಾರೆ, ಹಲವಾರು ದಶಕಗಳಿಂದ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮತ್ತು ಬಿಜೆಪಿಯ ಭದ್ರಕೋಟೆಯಾಗಿದ್ದ ಕ್ಷೇತ್ರದಲ್ಲಿ ಎರಡನೇ ಗೆಲುವು ದಾಖಲಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರು 57,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಲು ದಾಖಲಿಸಿದ್ದಾರೆ. ಹೀಗಾಗಿ ಮಹಿಳಾ ಕೋಟಾ ಅಡಿಯಲ್ಲಿ ಸಂಪುಟಕ್ಕೆ ಸೇರ್ಪಡೆಗೊಳಿಸಿಕೊಳ್ಳಬೇಕೆಂದ ಒತ್ತಾಯಗಳು ಕೇಳಿ ಬರುತ್ತಿವೆ.

ಇದೇ ವೇಳೆ ಜಿಲ್ಲೆಯ ಹಲವು ಪಕ್ಷದ ಶಾಸಕರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಜಾರಕಿಹೊಳಿ ಅವರು ಬೆಳಗಾವಿಯಿಂದ ಸಂಪುಟಕ್ಕೆ ಆಯ್ಕೆಯಾಗಬೇಕೆಂಬ ಆಗ್ರಹಗಳೂ ಕೇಳಿ ಬರುತ್ತಿವೆ. ಎರಡು ಬಾರಿ ಎಂಎಲ್ಸಿ ಮತ್ತು ನಾಲ್ಕು ಬಾರಿ ಶಾಸಕರಾಗಿದ್ದ ಜಾರಕಿಹೊಳಿ ಅವರು, ಈಗಾಗಲೇ ರಾಜ್ಯದಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರಗಳಲ್ಲಿ ಹಲವಾರು ಪ್ರಮುಖ ಖಾತೆಗಳನ್ನು ಹೊಂದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com