ಸಿಎಂ ಆಯ್ಕೆ ಬಿಕ್ಕಟ್ಟು: ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಜೊತೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಪ್ರತ್ಯೇಕ ಸಭೆ

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ದೊರೆತು 5 ದಿನಗಳೇ ಕಳೆದರೂ ಸಿಎಂ ಆಯ್ಕೆ ಕಗ್ಗಂಟಾಗಿದೆ. 
ಡಿಕೆ ಶಿವಕುಮಾರ್-ಕೆಸಿ ವೇಣುಗೋಪಾಲ್
ಡಿಕೆ ಶಿವಕುಮಾರ್-ಕೆಸಿ ವೇಣುಗೋಪಾಲ್

ನವದೆಹಲಿ: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ದೊರೆತು 5 ದಿನಗಳೇ ಕಳೆದರೂ ಸಿಎಂ ಆಯ್ಕೆ ಕಗ್ಗಂಟಾಗಿದೆ. 

ಸಿಎಂ ಆಯ್ಕೆ ಕಸರತ್ತು ಇಂದೂ ಮುಂದುವರೆದಿದ್ದು, ಸರಣಿ ಸಭೆಗಳು ನಡೆಯುತ್ತಿವೆ. ಈ ನಡುವೆ ಸಿಎಂ ಸ್ಥಾನದ ಆಕಾಂಕ್ಷಿಗಳಾದ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್  ಪಕ್ಷದ ವರಿಷ್ಠರೊಂದಿಗೆ ಮಾತಕತೆ ಮುಂದುವರೆಸಿದ್ದಾರೆ.

ಮೇ.17 ರಂದು ರಾತ್ರಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಪ್ರತ್ಯೇಕವಾಗಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಇದೇ ವೇಳೆ, ಕೆ.ಸಿ ವೇಣುಗೋಪಾಲ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿಯ ನಿವಾಸಕ್ಕೆ ಭೇಟಿ ನೀಡಿದ್ದು, ಸಿಎಂ ಆಯ್ಕೆ ಕುರಿತು ಮಾತುಕತೆ ನಡೆಸಲಿದ್ದಾರೆ. ಇದಕ್ಕೂ ಮೊದಲು ಡಿ.ಕೆ ಶಿವಕುಮಾರ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು

ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ರಾತ್ರಿ ಹೈಕಮಾಂಡ್ ನ ಮಹತ್ವದ ಸಭೆ ನಡೆದಿದ್ದು ಈ ಸಭೆಯಲ್ಲಿ ವೀಡೀಯೋ ಕಾನ್ಫರೆನ್ಸ್ ಮೂಲಕ ಸೋನಿಯಾ ಗಾಂಧಿ ಸಹ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಇಂದು ಹೈಕಮಾಂಡ್ ಸಿಎಂ ಆಯ್ಕೆ ಬಗ್ಗೆ ಅಂತಿಮ ಸಭೆ ನಡೆಸಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com