
ಬೆಂಗಳೂರು: ಬಹುಮತದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ಕೊನೆಗೂ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದ್ದು, ಈ ಕುರಿತು ಅಧಿಕೃತ ಘೋಷಣೆ ಬಾಕಿ ಇದೆ ಎಂದು ಹೇಳಲಾಗಿದೆ.
ಈಗಾಗಲೇ ನಗರದ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆಯುತ್ತಿದ್ದು, ರಾಜ್ಯಪಾಲ ಥೋವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಲಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಿಗದಿಯಾದ ಬೆನ್ನಲ್ಲೇ ಅಧಿಕಾರಿಗಳು ಸಿದ್ಧತೆಗಾಗಿ ಕಂಠೀರವ ಸ್ಟೇಡಿಯಂಗೆ ತೆರಳಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಮತ್ತು ಕಾಂಗ್ರೆಸ್‌ನ ಬೆಂಬಲಿತ ಬೇರೆ ರಾಜ್ಯದ ಮುಖ್ಯಮಂತ್ರಿಗಳು ಆಗಮಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
2013 ರಲ್ಲೂ ಸಿದ್ದರಾಮಯ್ಯ ಅವರು, ಕಂಠೀರವ ಸ್ಟೇಡಿಯಂನಲ್ಲೇ ಪ್ರಮಾಣವಚನ ಸ್ವೀಕರಿಸಿ 5 ವರ್ಷ ಅಧಿಕಾರ ನಡೆಸಿದ್ದರು. ಈ ಕಾರಣಕ್ಕೆ ಎರಡನೇ ಬಾರಿ ಸಿದ್ದರಾಮಯ್ಯ ಕಂಠೀರವ ಸ್ಟೇಡಿಯಂನಲ್ಲೇ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
Advertisement