ದಾವಣಗೆರೆ: ಹರಿಹರ ಶಾಸಕರಾಗಿ ಆಯ್ಕೆಯಾಗಿರುವ ಬಿ.ಪಿ.ಹರೀಶ್ ವಿರುದ್ಧ ದಾವಣಗೆರೆ ಜಿಲ್ಲಾ ಪೊಲೀಸರು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಬುಧವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಾಸಕರು ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದನ್ನು ನೋಡಿ ತಮಗೆ ಆಘಾತವಾಗಿದೆ ಎಂದು ಬಿಎಸ್ಪಿ ಮುಖಂಡ ಹನುಮಂತಪ್ಪ ದೂರು ನೀಡಿದ್ದರು.
ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ದಾವಣಗೆರೆ ಎಸ್ಪಿ ಡಾ.ಕೆ.ಅರುಣ್ ಅವರು ಹೇಳಿದ್ದಾರೆ.
ಹರೀಶ್ ಅವರು 7 ಬಾರಿ ಚುನಾವಣೆಗೆ ಸ್ಪರ್ಧಿಸಿದ್ದು, 2 ಬಾರಿ ಗೆಲುವು ಸಾಧಿಸಿದ್ದಾರೆ. ಘಟನೆ ಸಂಬಂಧ ದೂರು ದಾಖಲಿಸಿಕೊಂಡಿರುವ ಹರಿಹರ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Advertisement