ತುಷಾರ್ ಗಿರಿನಾಥ್
ತುಷಾರ್ ಗಿರಿನಾಥ್

ಮತದಾರರ ದತ್ತಾಂಶ ಸಂಗ್ರಹಕ್ಕೆ 'ಚಿಲುಮೆ' ಸಂಸ್ಥೆಗೆ ಅವಕಾಶ: ತುಷಾರ್ ಗಿರಿನಾಥ್ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಆಗ್ರಹ

ಮತದಾರರ ದತ್ತಾಂಶ ಸಂಗ್ರಹಿಸಲು ಎನ್‌ಜಿಒ ಚಿಲುಮೆಗೆ ಅವಕಾಶ ನೀಡಿದ ಆರೋಪದ ಮೇಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಆಗ್ರಹಿಸಿದ್ದಾರೆ.
Published on

ಬೆಂಗಳೂರು: ಮತದಾರರ ದತ್ತಾಂಶ ಸಂಗ್ರಹಿಸಲು ಎನ್‌ಜಿಒ ಚಿಲುಮೆಗೆ ಅವಕಾಶ ನೀಡಿದ ಆರೋಪದ ಮೇಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಆಗ್ರಹಿಸಿದ್ದಾರೆ.

ಹೊಸ ಸರ್ಕಾರ ಚಿಲುಮೆ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಬೇಕು ಎಂದು ಬಾಬು ಅವರು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ್ ಅವರಿಗೆ ಮೇಲ್ ಕಳುಹಿಸಿದ್ದಾರೆ. ಬಿಬಿಎಂಪಿ ವಿಷಯಗಳಲ್ಲಿ ಯಾವುದೇ ಹಣಕಾಸಿನ ನಿರ್ಧಾರ ತೆಗೆದುಕೊಳ್ಳದಂತೆ ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಿದರು.

ಇದೇ ವೇಳೆ ಮಾಜಿ ಕಾರ್ಪೊರೇಟರ್ ಎನ್.ಶಿವರಾಜು ಅವರು ಆಸ್ತಿ ತೆರಿಗೆ ಮೇಲಿನ ಶೇ.5ರಷ್ಟು ರಿಯಾಯಿತಿಯನ್ನು ವಿಸ್ತರಿಸುವಂತೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ತುಷಾರ್ ಗಿರಿನಾಥ್ ಹಲವು ಅಧಿಕಾರಿಗಳು ಚುನಾವಣೆ ಕಾರ್ಯದಲ್ಲಿ ನಿರತರಾಗಿದ್ದರು.  ಸಿಬ್ಬಂದಿ ಇಲ್ಲದ ಕಾರಣ ತೆರಿಗೆ ವಿಷಯವಾಗಿ ತೊಂದರೆಯಾಗಿದೆ ಎಂದರು. ಬಿಬಿಎಂಪಿಯು ಏಪ್ರಿಲ್ ಅಂತ್ಯದವರೆಗೆ ಶೇಕಡಾ 5 ರಷ್ಟು ರಿಯಾಯಿತಿ ನೀಡಿದ್ದು ಮತ್ತು ಈಗ ಅದೇ ಪ್ರಮಾಣವನ್ನು ಇನ್ನೂ ಒಂದು ತಿಂಗಳು ವಿಸ್ತರಿಸಲು ಬಯಸಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com