ಮತ್ತೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಿದ್ದರಾಮನಹುಂಡಿಯಲ್ಲಿ ಮುಗಿಲುಮುಟ್ಟಿದ ಅಭಿಮಾನಿಗಳ ಸಂಭ್ರಮ

ಸಿದ್ದರಾಮಯ್ಯ ಅವರು ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ಈ ನಡುವಲ್ಲೇ ಸಿದ್ದರಾಮಯ್ಯ ಅವರ ಹುಟ್ಟೂರಾದ‌ ಸಿದ್ದರಾಮನಹುಂಡಿಯಲ್ಲಿ ಸಂಭ್ರಮ‌ ಮನೆ ಮಾಡಿದೆ.
ಸಿದ್ದರಾಮಯ್ಯ ಅವರ ಕಟೌಟ್'ಗೆ ಹಾಲಿನ ಅಭಿಷೇಖ ಮಾಡುತ್ತಿರುವ ಅಭಿಮಾನಿಗಳು.
ಸಿದ್ದರಾಮಯ್ಯ ಅವರ ಕಟೌಟ್'ಗೆ ಹಾಲಿನ ಅಭಿಷೇಖ ಮಾಡುತ್ತಿರುವ ಅಭಿಮಾನಿಗಳು.

ಮೈಸೂರು: ಸಿದ್ದರಾಮಯ್ಯ ಅವರು ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ಈ ನಡುವಲ್ಲೇ ಸಿದ್ದರಾಮಯ್ಯ ಅವರ ಹುಟ್ಟೂರಾದ‌ ಸಿದ್ದರಾಮನಹುಂಡಿಯಲ್ಲಿ ಸಂಭ್ರಮ‌ ಮನೆ ಮಾಡಿದೆ.

ಸಿದ್ದರಾಮಯ್ಯ ಅವರು ಶನಿವಾರ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆಂಬ ಮಾಹಿತಿ ಹೊರಬೀಳುತ್ತಿದ್ದಂತೆಯೇ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಸಿದ್ದರಾಮಯ್ಯ ಅವರ ಬೃಹತ್ ಕಟೌಟ್ ಗಳಿಗೆ ಗ್ರಾಮಸ್ಥರು ಹಾಲಿನ ಅಭಿಷೇಕ ಮಾಡುತ್ತಿದ್ದಾರೆ.

ಈ ನಡುವೆ ಸಿದ್ದರಾಮಯ್ಯ ಅವರ ಮೊಮ್ಮಗ ದವನ್ ರಾಕೇಶ್ ಅವರ ಫೋಟೋಗಳೂ ಕೂಡ ಗ್ರಾಮದಲ್ಲಿ ರಾರಾಜಿಸುತ್ತಿದ್ದು, ಮುಂದಿನ ಅಧಿಪತಿ (ಭವಿಷ್ಯದ ನಾಯಕ) ಎಂಬ ಅಡಿಬರಹಗಳು ಫೋಟೋಗಳಲ್ಲಿ ಕಂಡು ಬಂದಿದೆ.

 ಕರ್ನಾಟಕದ ಮುಖ್ಯಮಂತ್ರಿ ಆಯ್ಕೆ ಕೊನೆಗೂ ಬಗೆಹರಿದಿದ್ದು, ಕಳೆದ ನಾಲ್ಕೈದು ದಿನಗಳಿಂದ ದೆಹಲಿ ನಡೆಯುತ್ತಿದ್ದ ಸಿಎಂ ಕಗ್ಗಂಟನ್ನು ಹೈಕಮಾಂಡ್​ ಬಿಡಿಸುವಲ್ಲಿ ಯಶಸ್ವಿಯಾಗಿದೆ.

5 ವರ್ಷಗಳ ಅಧಿಕಾರ ಅವಧಿಯಲ್ಲಿ ತಲಾ ಎರಡೂವರೆ ವರ್ಷ ಅಧಿಕಾರ ಹಂಚಿಕೆ ಸೂತ್ರದ ಮೂಲಕ ಹೈಕಮಾಂಡ್ ನಾಯಕರು ಡಿಕೆ ಶಿವಕುಮಾರ್ ಅವರ ಮನವೊಲಿಸಿದ್ದಾರೆ. ಇದರಂತೆ ಸಿದ್ದರಾಮಯ್ಯ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಹೈಕಮಾಂಡ್‌ ಆಯ್ಕೆ ಮಾಡಿದ್ದು, ಶನಿವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಡಿ.ಕೆ ಶಿವಕುಮಾರ್‌ ಅವರು ಉಪ ಮುಖ್ಯಮಂತ್ರಿಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

ತಲಾ ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆಗೆ ಇಬ್ಬರೂ ನಾಯಕರು ಒಪ್ಪಿಕೊಂಡಿದ್ದು, ಸಿದ್ದರಾಮಯ್ಯ ಮೊದಲ ಅವಧಿಯಲ್ಲಿ ಅಧಿಕಾರ ನಡೆಸಲಿದ್ದಾರೆ. ನಂತರದ ಅವಧಿಗೆ ಡಿ.ಕೆ ಶಿವಕುಮಾರ್‌ ಮುಖ್ಯಮಂತ್ರಿಯಾಗಲಿದ್ದಾರೆಂದು ತಿಳಿದುಬಂದಿದೆ.

ಅಧಿಕಾರ ಹಂಚಿಕೆ ಮತ್ತು ಇತರ ವಿಷಯಗಳಲ್ಲಿ ಒಮ್ಮತಕ್ಕೆ ಬರುವ ಸಲುವಾಗಿಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರು ಇಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಇಂದಿರಾ ಭವನದಲ್ಲಿ ಸಂಜೆ 7 ಗಂಟೆಗೆ ಸಭೆ ನಡೆಯಲಿದ್ದು, ನೂತನ ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಸಂಸದರು ಹಾಜರಿರಬೇಕಾಗಿ ಸೂಚಿಸಿದ್ದಾರೆ.

ಎರಡೂವರೆ ವರ್ಷಗಳ ಬಳಿಕ ಅಧಿಕಾರ ಬಿಟ್ಟುಕೊಡುವ ವಾಗ್ದಾನವನ್ನು ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಡಬೇಕು ಎಂಬುದು ಡಿ.ಕೆ ಶಿವಕುಮಾರ್‌ ಅವರ ಷರತ್ತು ಎಂದು ಮೂಲಗಳು ಹೇಳಿವೆ.

ಈ ಸಭೆಯ ನಂತರ, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಆಯ್ಕೆಯಾಗಿರುವ ವಿಚಾರವನ್ನು ಅಧಿಕೃತವಾಗಿ ಘೋಷಿಸಲಿದ್ದಾರೆಂದು ಹೇಳಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com