ಬಿಬಿಎಂಪಿ ಅರಣ್ಯ ಘಟಕದಿಂದ ಸಾರ್ವಜನಿಕರಿಗೆ ಉಚಿತವಾಗಿ ಸಸಿಗಳ ವಿತರಣೆ

ಬಿಬಿಎಂಪಿ ಅರಣ್ಯ ಘಟಕದಿಂದ ಸಾರ್ವಜನಿಕರು, ಸ್ವಯಂ ಸೇವಾ ಸಂಘ ಸಂಸ್ಥೆಗಳಿಗೆ ಉಚಿತವಾಗಿ ಸಸಿಗಳನ್ನು ವಿತರಿಸಲಾಗುತ್ತಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಬಿಬಿಎಂಪಿ ಅರಣ್ಯ ಘಟಕದಿಂದ ಸಾರ್ವಜನಿಕರು, ಸ್ವಯಂ ಸೇವಾ ಸಂಘ ಸಂಸ್ಥೆಗಳಿಗೆ ಉಚಿತವಾಗಿ ಸಸಿಗಳನ್ನು ವಿತರಿಸಲಾಗುತ್ತಿದೆ.

ವಿಶ್ವ ಪರಿಸರ ದಿನಾಚರಣೆ  ಹಾಗೂ ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಬೆಂಗಳೂರು ನಗರವನ್ನು ಹಸಿರೀಕರಣ ಮಾಡಲು  ವಿವಿಧ ವಲಯಗಳ ವ್ಯಾಪ್ತಿಯ ಸಸ್ಯ ಕ್ಷೇತ್ರಗಳಲ್ಲಿ "8*12" ಅಳತೆಯ ವಿವಿಧ ಜಾತಿಯ ಸಸಿಗಳು ಲಭ್ಯವಿದ್ದು, ಅವುಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. 

 ಬೊಮ್ಮನಹಳ್ಳಿ, ಯಲಹಂಕ, ರಾಜರಾಜೇಶ್ವರಿ ನಗರ ಹಾಗೂ ಮಹದೇವಪುರ ವಲಯಗಳಲ್ಲಿ ಬಿಬಿಎಂಪಿ ಅರಣ್ಯ ಘಟಕ ವತಿಯಿಂದ  ವಿತರಿಸಲು ಅಗತ್ಯ ವ್ಯವಸ್ಥೆ ಮಾಡಲಾಗಿದ್ದು, ಆಸಕ್ತರು ಅಧಿಕಾರಿಗಳಿಗೆ ಮನವಿ  ಸಲ್ಲಿಸಬಹುದಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಸಾರ್ವಜನಿಕ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com