ಮಹದೇವಪುರ ವಲಯದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಶೀಘ್ರದಲ್ಲೇ ಪುನರಾರಂಭ: ಬಿಬಿಎಂಪಿ ಮುಖ್ಯ ಆಯುಕ್ತ

ಮಹದೇವಪುರ ವಲಯದ ರಾಜಕಾಲುವೆ ಮೇಲಿನ 34 ಒತ್ತುವರಿಗಳನ್ನು ತೆರವುಗೊಳಿಸಲು ಕಂದಾಯ ಇಲಾಖೆ ಆದೇಶ ಹೊರಡಿಸಿರುವುದರಿಂದ ಪಾಲಿಕೆ ಶೀಘ್ರದಲ್ಲಿಯೇ ಒತ್ತವರಿ ತೆರವು ಕಾರ್ಯಾಚರಣೆ ಪುನರಾರಂಭಿಸಲಾಗುತ್ತದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬುಧವಾರ ಹೇಳಿದ್ದಾರೆ.
ತುಷಾರ್ ಗಿರಿನಾಥ್
ತುಷಾರ್ ಗಿರಿನಾಥ್

ಬೆಂಗಳೂರು: ಮಹದೇವಪುರ ವಲಯದ ರಾಜಕಾಲುವೆ ಮೇಲಿನ 34 ಒತ್ತುವರಿಗಳನ್ನು ತೆರವುಗೊಳಿಸಲು ಕಂದಾಯ ಇಲಾಖೆ ಆದೇಶ ಹೊರಡಿಸಿರುವುದರಿಂದ ಪಾಲಿಕೆ ಶೀಘ್ರದಲ್ಲಿಯೇ ಒತ್ತವರಿ ತೆರವು ಕಾರ್ಯಾಚರಣೆ ಪುನರಾರಂಭಿಸಲಾಗುತ್ತದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬುಧವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕಾರ್ಯಾಚರಣೆಯು ಬಿಬಿಎಂಪಿಯ ಮುಂಗಾರು ಪೂರ್ವ ಸಿದ್ಧತೆ ಯೋಜನೆಯ ಭಾಗವಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 600 ಮಳೆನೀರು ಚರಂಡಿ ಒತ್ತುವರಿ ಪ್ರಕರಣಗಳು ಬಾಕಿ ಇವೆ. ಈಗ ಕಂದಾಯ ಇಲಾಖೆ ಒತ್ತುವರಿ ತೆರವಿಗೆ ಆದೇಶ ಹೊರಡಿಸಿದ್ದು, ಅದರಂತೆ ಕಾರ್ಯಾಚರಣೆಯನ್ನು ಪುನರಾರಂಭಿಸುತ್ತೇವೆಂದು ಹೇಳಿದರು.

ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ಕಂದಾಯ ಇಲಾಖೆ ಆದೇಶ ಹೊರಡಿಸಿತ್ತು. ಚುನಾವಣೆ ವೇಳೆ ತೆರವು ಕಾರ್ಯಾಚರಣೆ ಆರಂಭಿಸಿದರೆ ಅದು ಮತದಾರರಲ್ಲಿ ಗೊಂದಲಕ್ಕೆ ಕಾರಣವಾಗಬಹುದೆಂಬ ಕಾರಣಕ್ಕೆ ಪಾಲಿಕೆ ಚುನಾವಣೆ ಮುಗಿಯುವವರೆಗೆ ಕಾಯುತ್ತಿತ್ತು ಎಂದು ತಿಳಿಸಿದರು.

ಬಳಿಕ ಮಾತನಾಡಿದ ಬಿಬಿಎಂಪಿಯ ಮಳೆನೀರು ಚರಂಡಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಮಾಲತಿ ಆರ್ ಅವರು, ಒತ್ತುವರಿ ವಿಚಾರವಾಗಿ ಬುಧವಾರ ಸಭೆ ನಡೆಸಲಾಗಿದೆ. ತೆರವು ಕಾರ್ಯಾಚರಣೆ ಸೋಮವಾರ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಹೇಳಿದರು.

ವರ್ತೂರು ಮತ್ತು ಬೆಳ್ಳಂದೂರು ಕೆರೆಗಳ ಬಳಿ ಬಿಬಿಎಂಪಿ ಅತಿಕ್ರಮಣವನ್ನು ಗುರುತಿಸಿದೆ, ಆದರೆ, ಆ ಪ್ರದೇಶದಲ್ಲಿ ಯಾವುದೇ ಕಾರ್ಯಾಚರಣೆಗಳನ್ನೂ ನಡೆಸಿಲ್ಲ ಎಂದು ವರ್ತೂರು ರೈಸಿಂಗ್‌ನ ಜಗದೀಶ್ ರೆಡ್ಡಿ ಅವರು ಹೇಳಿದ್ದಾರೆ.

ಮಳೆನೀರು ಚರಂಡಿಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಬಿಬಿಎಂಪಿ ತನ್ನ ಧೋರಣೆಯನ್ನು ಬದಲಿಸಿಕೊಂಡಿಲ್ಲ ಎಂದು ಎಎಪಿ ಮುಖಂಡ ಅಶೋಕ್ ಮೃತುಂಜಯ ಹೇಳಿದ್ದಾರೆ.

ಮುಂಗಾರು ಮಳೆಗೆ ಕೆಲವೇ ದಿನಗಳು ಬಾಕಿ ಇರುವಾಗ ಬಿಬಿಎಂಪಿ ಅತಿಕ್ರಮಣಗಳ ವಿರುದ್ಧ ತನ್ನ ಕಾರ್ಯಾಚರಣೆಯನ್ನು ಪುನರಾರಂಭಿಸುತ್ತಿದೆ. ಕಳೆದ ಬಾರಿಯಂತೆಯೇ ಈ ಬಾರಿ ಕೂಡ ಪಾಲಿಕೆಯು ಶ್ರೀಮಂತ ಹಾಗೂ ಪ್ರಭಾವಿ ನಾಯಕರ ಅತಿಕ್ರಮಣಗಳ ಮೇಲೆ ಕಾರ್ಯಾಚರಣೆ ನಡೆಸುವುದಿಲ್ಲ ಎಂದು ಕಿಡಿಕಾರಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com