ನಕಲಿ ಮತದಾರರಿಂದ ಯತ್ನಾಳ್'ಗೆ ಗೆಲುವು: ತನಿಖೆಗೆ ಕಾಂಗ್ರೆಸ್ ಆಗ್ರಹ

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ನಕಲಿ ಮತದಾರರಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ಗೆಲುವು ಸಾಧಿಸಿದ್ದಾರೆಂದು ಆರೋಪಿಸಿರುವ ಕಾಂಗ್ರೆಸ್, ಈ ಬಗ್ಗೆ ತನಿಖೆ ನಡೆಸುವಂತೆ ಗುರುವಾರ ಆಗ್ರಹಿಸಿದೆ.
ಬಸನಗೌಡ ಪಾಟೀಲ್ ಯತ್ನಾಳ್.
ಬಸನಗೌಡ ಪಾಟೀಲ್ ಯತ್ನಾಳ್.

ವಿಜಯಪುರ: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ನಕಲಿ ಮತದಾರರಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ಗೆಲುವು ಸಾಧಿಸಿದ್ದಾರೆಂದು ಆರೋಪಿಸಿರುವ ಕಾಂಗ್ರೆಸ್, ಈ ಬಗ್ಗೆ ತನಿಖೆ ನಡೆಸುವಂತೆ ಗುರುವಾರ ಆಗ್ರಹಿಸಿದೆ.

ವಿಜಯಪುರ ಕ್ಷೇತ್ರದ ಪಕ್ಷದ ಪರಾಜಿತ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ನೇತೃತ್ವದಲ್ಲಿ ಹಲವು ಕಾಂಗ್ರೆಸ್ ಮುಖಂಡರು ಗುರುವಾರ ಜಿಲ್ಲಾಡಳಿತದ ಮೂಲಕ ಚುನಾವಣಾ ಆಯೋಗಕ್ಕೆ ಮನವಿ ಪತ್ರ ಸಲ್ಲಿಸಿದರು.

ಬಳಿಕ ಪತ್ರಿಕಾ ಪ್ರಕಟಣೆಯಲ್ಲಿ ಮಾತನಾಡಿದ ಮುಶ್ರಿಫ್ ಅವರು, ಯತ್ನಾಳ್ ಅವರು ಮತದಾರರ ಪಟ್ಟಿಯನ್ನು ತಿರುಚುವ ಮೂಲಕ ಗೆದ್ದಿದ್ದಾರೆ ಎಂದು ಆರೋಪಿಸಿದ್ದಾರೆ.

ಕಲಬುರಗಿಯ ಚಿಂಚೋಳಿ ತಾಲೂಕಿನಿಂದ ಯತ್ನಾಳ್ ಪರ ಮತ ಹಾಕಲು ಬಂದ ನಕಲಿ ಮತದಾರರನ್ನು ಕಾಂಗ್ರೆಸ್ ಕಾರ್ಯಕರ್ತರು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದರೂ ಪೊಲೀಸರು ಅವರ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದರು.

ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ ಸೆಕ್ಷನ್ 144 ಸೆಕ್ಷನ್ ಜಾರಿಯಲ್ಲಿದ್ದರು. ಯತ್ನಾಳ್ ಬೆಂಬಲಿಗರು ಸಿದ್ದೇಶ್ವರ ದೇವಸ್ಥಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು ಎಂದು ಮಾಜಿ ಕಾರ್ಪೊರೇಟರ್ ಅಬ್ದುಲ್ ರಜಾಕ್ ಹೊರ್ತಿ ಅವರು ಇದೇ ವೇಳೆ ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com