ಚುನಾವಣಾ ಸಮಯದಲ್ಲಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 347 ಕೆಜಿ ಗಾಂಜಾ ವಶಕ್ಕೆ, 27 ಮಂದಿ ಬಂಧನ

ರಾಜ್ಯ ವಿಧಾನಸಭಾ ಚುನಾವಣೆ ಸಮಯದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 347.3 ಕೆಜಿ ಗಾಂಜಾ ವಶಪಡಿಸಿಕೊಂಡು 27 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸಮಯದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 347.3 ಕೆಜಿ ಗಾಂಜಾ ವಶಪಡಿಸಿಕೊಂಡು 27 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ.

ಗಾಂಜಾ ಮಾರಾಟದ ವಿರುದ್ಧ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ ಹಿರಿಯ ಅಧಿಕಾರಿಗಳೊಂದಿಗೆ ವಿಶೇಷ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಕಾರ್ಯಾಚರಣೆ ನಡೆಸಿದೆ.

ಇದರಂತೆ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆಯಡಿ ಒಟ್ಟು 24 ಪ್ರಕರಣಗಳನ್ನು ದಾಖಲಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಅಲ್ಲದೆ, 2.2 ಕೋಟಿಗೂ ಹೆಚ್ಚು ಲೆಕ್ಕವಿಲ್ಲದ ನಗದನ್ನು ವಶಪಡಿಸಿಕೊಂಡು ಐಟಿ ಇಲಾಖೆಗೆ ಹಸ್ತಾಂತರಿಸಿರುವುದಾಗಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರ್ಕಾರಿ ರೈಲ್ವೆ ಪೊಲೀಸರು ಕಾರ್ಯಾಚರಣೆಯಲ್ಲಿ ಸಹಕರಿಸಿದರು. ಆರ್‌ಪಿಎಫ್ ಶ್ವಾನದಳವು ಮಾದಕ ವಸ್ತುಗಳ ಪತ್ತೆ ಮತ್ತು ವಶಪಡಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ತಿಳಿಸಿದೆ.

ಹಿರಿಯ ವಿಭಾಗೀಯ ಭದ್ರತಾ ಕಮಿಷನರ್, ಆರ್‌ಪಿಎಫ್, ಬೆಂಗಳೂರಿನ ದೇವಾಂಶ್ ಶುಕ್ಲಾ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ ಎಂದು ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com