ಸಿದ್ದರಾಮಯ್ಯ ಪ್ರಮಾಣವಚನಕ್ಕೆ ಜನಸಾಗರ: ನೂಕುನುಗ್ಗಲು ಹಿನ್ನೆಲೆ ಪೊಲೀಸರಿಂದ ಲಾಠಿ ಚಾರ್ಜ್!

ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಭೂತಪೂರ್ವ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ಸಿಗ ಸಿದ್ದರಾಮಯ್ಯ ಅವರು 2ನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮೊದಲ ಬಾರಿ ಉಪ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕಾರ ಮಾಡಲಿದ್ದು...
ಸ್ಥಳದಲ್ಲಿರುವ ಪೊಲೀಸರು.
ಸ್ಥಳದಲ್ಲಿರುವ ಪೊಲೀಸರು.

ಬೆಂಗಳೂರು: ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಾವಿರಾರು ಜನರು ಕಂಠೀರವ ಸ್ಟೇಡಿಯಂನತ್ತ ಧಾವಿಸುತ್ತಿದ್ದು, ಸ್ಥಳದಲ್ಲಿ ನೂಕುನುಗ್ಗಲು ಏರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಜನರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆಂದು ಶನಿವಾರ ತಿಳಿದುಬಂದಿದೆ.

ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಭೂತಪೂರ್ವ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ಸಿಗ ಸಿದ್ದರಾಮಯ್ಯ ಅವರು 2ನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮೊದಲ ಬಾರಿ ಉಪ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

ಈ ಹಿನ್ನೆಲೆಯಲ್ಲಿ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಜ್ಯದ ಮೂಲೆ ಮೂಲೆಗಳಿಂದ ಜನರು ನಗರಕ್ಕೆ ಆಗಮಿಸುತ್ತಿದ್ದಾರೆ.

ಇಂದು ಮಧ್ಯಾಹ್ನ 12.30ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅಪಾರ ಜನಸಾಗರದ ನಡುವೆ ಸಿದ್ದರಾಮಯ್ಯ, ಡಿಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

ಇದರಂತೆ ಸಮಾರಂಭದಲ್ಲಿ ಪಾಲ್ಗೊಳ್ಳಲೂ ಸಾವರಾರು ಜನರು ಕಂಠೀರವ ಕ್ರೀಡಾಂಗಣಕ್ಕೆ ಆಗಮಿಸುತ್ತಿದ್ದು, ಸ್ಥಳದಲ್ಲಿ ನೂಕು ನುಗ್ಗಲು ಏರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ ಎಂದು ವರದಿಗಳಿಂದ ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com