ಸರ್ಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ಜೆಡಿಎಸ್ ಪರಿಪೂರ್ಣ ಬೆಂಬಲ: ಹೆಚ್.ಡಿ. ಕುಮಾರಸ್ವಾಮಿ

ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಸರ್ಕಾರಕ್ಕೆ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಶುಭಾಶಯ ಕೋರಿದ್ದಾರೆ.  
ಹೆಚ್ ಡಿ ಕುಮಾರಸ್ವಾಮಿ
ಹೆಚ್ ಡಿ ಕುಮಾರಸ್ವಾಮಿ
Updated on

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಸರ್ಕಾರಕ್ಕೆ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಶುಭಾಶಯ ಕೋರಿದ್ದಾರೆ.  

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಶುಭ ಹಾರೈಸಿದ್ದಾರೆ.

ರಾಜ್ಯದ ಜನತೆಗೆ ಅರ್ಪಣಾ ಮನೋಭಾವದಿಂದ ಅವರೆಲ್ಲರೂ ಸೇವೆ ಮಾಡಲಿ. ಕನ್ನಡನಾಡಿನ ಜನಹಿತಕ್ಕಾಗಿ ಕಾಂಗ್ರೆಸ್ ಸರಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ಜೆಡಿಎಸ್ ಪಕ್ಷ ಪರಿಪೂರ್ಣ ಬೆಂಬಲ ನೀಡಲಿದೆ ಎಂದು ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com