ಇಂದಿನಿಂದ ರಾಜ್ಯದಲ್ಲಿ ಹೊಸ ಸರ್ಕಾರ: 2ನೇ ಬಾರಿಗೆ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ, ಆಹ್ವಾನ ನೀಡದ್ದಕ್ಕೆ ಕೇರಳ ಸಿಪಿಐ(ಎಂ) ಅಸಮಾಧಾನ

ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಭೂತಪೂರ್ವ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ಸಿಗ ಸಿದ್ದರಾಮಯ್ಯ ಅವರು 2ನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮೊದಲ ಬಾರಿ ಉಪ ಮುಖ್ಯಮಂತ್ರಿಯಾಗಿ ಶನಿವಾರ ಮಧ್ಯಾಹ್ನ 12.30ಕ್ಕೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಭೂತಪೂರ್ವ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ಸಿಗ ಸಿದ್ದರಾಮಯ್ಯ ಅವರು 2ನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮೊದಲ ಬಾರಿ ಉಪ ಮುಖ್ಯಮಂತ್ರಿಯಾಗಿ ಶನಿವಾರ ಮಧ್ಯಾಹ್ನ 12.30ಕ್ಕೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಈ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನ ನೀಡದ್ದಕ್ಕೆ ಕೇರಳದ ಆಡಳಿತಾರೂಢ ಸಿಪಿಐ(ಎಂ) ಅಸಮಾಧಾನ ವ್ಯಕ್ತಪಡಿಸಿದೆ.

ಸಿಪಿಎಂ ಹಿರಿಯ ನಾಯಕ ಮತ್ತು ಎಡ ಪ್ರಜಾಸತ್ತಾತ್ಮಕ ರಂಗದ ಸಂಚಾಲಕ ಇ ಪಿ ಜಯರಾಜನ್ ಅವರು. ಆಹ್ವಾನ ನೀಡದ್ದಕ್ಕೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ರಾಜಕೀಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರಿಯಾದ ಮಾರ್ಗಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಜಯರಾಜನ್ ಹೇಳಿದ್ದಾರೆ.

ಒಂದು ವೇಳೆ ಕಾಂಗ್ರೆಸ್ ಇಂತಹ ಕ್ರಮಕ್ಕೆ ಮುಂದಾದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಭವಿಷ್ಯ ಕೂಡ ಅನಿಶ್ಚಿತವಾಗಲಿದೆ ಎಂದು ತಿಳಿಸಿದ್ದಾರೆ.

ಈ ನಡುವೆ ಸಿಪಿಐ(ಎಂ) ಆಹ್ವಾನ ನೀಡದಿರುವುದನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸೇರಿದಂತೆ ಕಾಂಗ್ರೆಸ್ ನಾಯಕರು ಸಮರ್ಥಿಸಿಕೊಂಡಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ರಾಜಕೀಯ ಪಕ್ಷಗಳ ರಾಷ್ಟ್ರೀಯ ನಾಯಕರನ್ನು ಮಾತ್ರ ಆಹ್ವಾನ ನೀಡಲಾಗಿದ್ದು, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com