ನಟ ಚೇತನ್
ರಾಜ್ಯ
ವಿಚಾರವಾದಿ ಎನಿಸಿಕೊಳ್ಳುವ ಸಿದ್ದು ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರಾ?: ನಟ ಚೇತನ್ ಕಿಡಿ
ನಟ, ಸಾಮಾಜಿಕ ಹೋರಾಟಗಾರ ಚೇತನ್ ಅವರು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.
ಬೆಂಗಳೂರು: ನಟ, ಸಾಮಾಜಿಕ ಹೋರಾಟಗಾರ ಚೇತನ್ ಅವರು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.
ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವೇಳೆ ಸಿದ್ದರಾಮಯ್ಯ ಅವರು, ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.
ಕಳೆದ ಬಾರಿ ಸಿದ್ದರಾಮಯ್ಯ ಅವರು ಸತ್ಯದ ಹೆಸರಲ್ಲಿ ಅಧಿಕಾರ ಸ್ವೀಕಾರ ಮಾಡಿದ್ದರು. ಆದರೆ, ಈ ಬಾರಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಚೇತನ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ‘ವಿಚಾರವಾದಿ’ ಎಂದು ಕರೆಸಿಕೊಳ್ಳುವ ಸಿದ್ದರಾಮಯ್ಯ ಅವರು ಕರ್ನಾಟಕದ ಸಿಎಂ ಆಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರಾ? ಯಾವ/ಯಾರು ದೇವರು? ದೇವರು ಎಲ್ಲಿದ್ದಾನೆ/ಳೆ/ರೆ? ಇದು ನಿರ್ದಿಷ್ಟವಾದ ಸೈದ್ಧಾಂತಿಕ ಆರಂಭವಲ್ಲ ಎಂದು ಹೇಳಿದ್ದಾರೆ.


