ರಾಜೀವ್ ಗಾಂಧಿ 32ನೇ ಪುಣ್ಯತಿಥಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ ಹಲವು ಕಾಂಗ್ರೆಸ್ ನಾಯಕರಿಂದ ಪುಷ್ಪನಮನ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯತಿಥಿ ಅಂಗವಾಗಿ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಮಾಜಿ ಪ್ರಧಾನಿಗೆ ಪುಷ್ಪನಮನ ಸಲ್ಲಿಸಿದರು.
ರಾಜೀವ್ ಗಾಂಧಿ 32ನೇ ಪುಣ್ಯತಿಥಿ
ರಾಜೀವ್ ಗಾಂಧಿ 32ನೇ ಪುಣ್ಯತಿಥಿ

ಬೆಂಗಳೂರು: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯತಿಥಿ ಅಂಗವಾಗಿ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಮಾಜಿ ಪ್ರಧಾನಿಗೆ ಪುಷ್ಪನಮನ ಸಲ್ಲಿಸಿದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಸೇರಿದಂತೆ ಹಲವು ನಾಯಕರು ನಮನ ಸಲ್ಲಿಸಿದರು.

ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್, 'ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ, ಭಾರತದ ಡಿಜಿಟಲ್ ಕ್ರಾಂತಿಯ ಹರಿಕಾರ, ದೇಶದ ಐಕ್ಯತೆ - ಸಮಗ್ರತೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಮಾಜಿ ಪ್ರಧಾನಿ, ಭಾರತ ರತ್ನ 'ರಾಜೀವ್ ಗಾಂಧಿ' ಅವರ ಪುಣ್ಯ ಸ್ಮರಣೆಯಂದು ಅವರನ್ನು ಗೌರವ, ಕೃತಜ್ಞತಾ ಪೂರ್ವಕವಾಗಿ ನೆನೆಯುತ್ತೇವೆ ಎಂದು ಟ್ವೀಟ್ ಮಾಡಿದೆ.

ಇಂದಿರಾ ಗಾಂಧಿ ಹತ್ಯೆ ಬಳಿಕ ದೇಶದ ಪ್ರಧಾನಿಯಾಗಿ ರಾಜೀವ್‌ ಗಾಂಧಿ ಅಧಿಕಾರ ವಹಿಸಿಕೊಂಡರು. 1984 ರಿಂದ 1989 ರವರೆಗೆ ಪ್ರಧಾನಿಯಾಗಿದ್ದರು. ಅತ್ಯಂತ ಕಿರಿಯ ವಯಸ್ಸಿಗೆ ಪ್ರಧಾನಿಯಾಗಿದ್ದರು. 1991ರ ಮೇ 21ರಂದು ತಮಿಳುನಾಡಿನ ಶ್ರೀಪೆರಂಬುದೂರಿನಲ್ಲಿ ಚುನಾವಣಾ ಪ್ರಚಾರದ ವೇಳೆ ರಾಜೀವ್‌ ಗಾಂಧಿ ಹತ್ಯೆಗೀಡಾದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com