ಕೊಪ್ಪಳ: ಕರೆಂಟ್ ಬಿಲ್ ಕಟ್ಟಲ್ಲ ಎಂದು ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದ ವ್ಯಕ್ತಿ, ವಿಡಿಯೋ ವೈರಲ್!

ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಇದೀಗ ರಾಜ್ಯದಲ್ಲಿ ನಾವು ಬಸ್ ಟಿಕೆಟ್ ತಗೋಳಲ್ಲ, ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಜನರು ಹೇಳುತ್ತಿದ್ದಾರೆ. ಅದರಂತೆ ಕೊಪ್ಪಳದಲ್ಲಿ ವ್ಯಕ್ತಿಯೋರ್ವ ಕರೆಂಟ್ ಬಿಲ್ ಕಟ್ಟು ಎಂದು ಹೇಳಿದ ಜೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. 
ಹಲ್ಲೆ ದೃಶ್ಯ
ಹಲ್ಲೆ ದೃಶ್ಯ

ಕೊಪ್ಪಳ: ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಇದೀಗ ರಾಜ್ಯದಲ್ಲಿ ನಾವು ಬಸ್ ಟಿಕೆಟ್ ತಗೋಳಲ್ಲ, ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಜನರು ಹೇಳುತ್ತಿದ್ದಾರೆ. ಅದರಂತೆ ಕೊಪ್ಪಳದಲ್ಲಿ ವ್ಯಕ್ತಿಯೋರ್ವ ಕರೆಂಟ್ ಬಿಲ್ ಕಟ್ಟು ಎಂದು ಹೇಳಿದ ಜೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. 

ಕೊಪ್ಪಳದ ಕೂಕನಪಳ್ಳಿ ಗ್ರಾಮದ ಚಂದ್ರಶೇಖರಯ್ಯ ಹಿರೇಮಠ ಎಂಬಾತ ಕರೆಂಟ್ ಬಿಲ್ ಕಟ್ಟುವಂತೆ ಹೇಳಿದ ಜೆಸ್ಕಾಂ ಸಿಬ್ಬಂದಿ ಮಂಜುನಾಥ್ ಎಂಬುವರಿಗೆ ಕಪಾಳಮೋಕ್ಷ ಮಾಡಿದ್ದು ಅಲ್ಲದೆ ಚಪ್ಪಲಿಯಿಂದ ಹೊಡೆದಿರುವ ವಿಡಿಯೋ ಇದೀಗ ವೈರಲ್ ಆಗಿದೆ. 

ಈ ಸಂಬಂಧ ಜೆಸ್ಕಾಂ ಸಿಬ್ಬಂದಿ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಈ ಹಿನ್ನೆಲೆಯಲ್ಲಿ ಪೊಲೀಸರು ಚಂದ್ರಶೇಖರಯ್ಯ ಹಿರೇಮಠ ಎಂಬಾತನನ್ನು ಬಂಧಿಸಿದ್ದಾರೆ. 

ಚಂದ್ರಶೇಖರಯ್ಯ ಹಿರೇಮಠ ಸುಮಾರು 9,990 ರೂಪಾಯಿಯಷ್ಟು ವಿದ್ಯುತ್ ಬಿಲ್ ಅನ್ನು ಬಾಕಿ ಉಳಿಸಿಕೊಂಡಿದ್ದರು. ಬಿಲ್ ಕಟ್ಟುವಂತೆ ಹೇಳಿದರೂ ಬಿಲ್ ಕಟ್ಟದಿದ್ದಾಗ ಮನೆಯ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿತ್ತು. ಇದರಿಂದ ಕೆರಳಿದ ಚಂದ್ರಶೇಖರಯ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com