ಶಾಂತಿ ಕದಡಿದರೆ ಭಜರಂಗ ದಳ, ಆರ್‌ಎಸ್‌ಎಸ್‌ ಗೂ ನಿಷೇಧ; ಬಿಜೆಪಿ ಜಾರಿಗೆ ತಂದಿದ್ದ ಮಸೂದೆಗಳು ವಾಪಸ್: ಪ್ರಿಯಾಂಕ್‌ ಖರ್ಗೆ

ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸುತ್ತದೆ, ಒಂದು ವೇಳೆ ಬಿಜೆಪಿ ನಾಯಕರಿಗೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು.
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ
Updated on

ಬೆಂಗಳೂರು: ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸುತ್ತದೆ, ಒಂದು ವೇಳೆ ಬಿಜೆಪಿ ನಾಯಕರಿಗೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ನಾವು ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡುತ್ತೇವೆ ಎಂದು ಭರವಸೆ ನೀಡಿದ್ದೇವೆ, ಒಂದು ವೇಳೆ ಶಾಂತಿ ಕದಡಿದರೆ ಅದು ಭಜರಂಗದಳ ಅಥವಾ ಆರ್‌ಎಸ್‌ಎಸ್ ಎಂಬುದನ್ನು ನಾವು ಪರಿಗಣಿಸುವುದಿಲ್ಲ.

ಕಾನೂನನ್ನು ಕೈಗೆ ತೆಗೆದುಕೊಂಡರೆ ನಿಷೇಧ ಕಟ್ಟಿಟ್ಟ ಬುತ್ತಿ. ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಭಜರಂಗದಳ, ಆರ್‌ಎಸ್‌ಎಸ್ ಸೇರಿದಂತೆ ಯಾವುದೇ ಸಂಘಟನೆಯನ್ನು ನಿಷೇಧಿಸಲು ಹಿಂದೆ ಮುಂದೆ ಯೋಚಿಸುವುದಿಲ್ಲ ಎಂದಿದ್ದಾರೆ.

ಹಿಜಾಬ್, ಹಲಾಲ್ ಕಟ್ ಮತ್ತು ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧವನ್ನು ಸರ್ಕಾರ ಹಿಂಪಡೆಯಲಿದೆ ಎಂದು ಅವರು ಹೇಳಿದರು. ಸಮಾಜದಲ್ಲಿ ಕಾನೂನು ಮತ್ತು ಪೊಲೀಸರ ಭಯವಿಲ್ಲದೆ ಕೆಲವು ಅಂಶಗಳು ಮುಕ್ತವಾಗಿ ವಿಹರಿಸುತ್ತಿವೆ. ಕಳೆದ ಮೂರು ವರ್ಷಗಳಿಂದ ಈ ಪ್ರವೃತ್ತಿ ನಡೆಯುತ್ತಿದೆ ಎಂದು ಪ್ರಿಯಾಂಕ್ ಹೇಳಿದ್ದಾರೆ.

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜನರು ಅವರನ್ನು ವಿರೋಧ ಪಕ್ಷದಲ್ಲಿ ಕೂರಿಸಲು ಕಾರಣವೇನು ಎಂಬುದನ್ನು ಬಿಜೆಪಿ ಅರ್ಥ ಮಾಡಿಕೊಳ್ಳಬೇಕು. ಕೇಸರಿಕರಣ ತಪ್ಪು ಎಂದು ಹೇಳಿದ್ದೇವೆ, ಎಲ್ಲರೂ ಅನುಸರಿಸಬಹುದಾದ ಬಸವಣ್ಣನವರ ತತ್ವಗಳನ್ನು ಕಾಂಗ್ರೆಸ್ ಅನುಸರಿಸುತ್ತದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com