ಇಂದಿರಾ ಕ್ಯಾಂಟೀನ್ ಗಳಿಗೆ ಮರುಜೀವ ನೀಡಲು ಬಿಬಿಎಂಪಿ ಮುಂದು!

ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದಿದ್ದು, ಇದರ ಬೆನ್ನಲ್ಲೇ ಇಂದಿರಾ ಕ್ಯಾಂಟೀನ್'ಗಳಿಗೆ ಮರುಜೀವ ನೀಡಲು ಬಿಬಿಎಂಪಿ ಭರದ ಸಿದ್ಧತೆಗಳನ್ನು ನಡೆಸುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದಿದ್ದು, ಇದರ ಬೆನ್ನಲ್ಲೇ ಇಂದಿರಾ ಕ್ಯಾಂಟೀನ್'ಗಳಿಗೆ ಮರುಜೀವ ನೀಡಲು ಬಿಬಿಎಂಪಿ ಭರದ ಸಿದ್ಧತೆಗಳನ್ನು ನಡೆಸುತ್ತಿದೆ.

ಇಂದಿರಾ ಕ್ಯಾಂಟೀನ್‌ಗಳ ಅಡುಗೆ ಕೋಣೆಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಮತ್ತು ಮರು ಸಜ್ಜುಗೊಳಿಸಲು ಪಾಲಿಕೆ ಚಿಂತನೆ ನಡೆಸುತ್ತಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಮೊಬೈಲ್ ಕ್ಯಾಂಟೀನ್‌ಗಳನ್ನು ಮರು ಆರಂಭಿಸುವ ಮತ್ತು ಆಹಾರದ ಗುಣಮಟ್ಟವನ್ನು ಸುಧಾರಿಸುವ ಬಗ್ಗೆ ಶೀಘ್ರದಲ್ಲೇ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

ಬಿಬಿಎಂಪಿ ವಿಶೇಷ ಆಯುಕ್ತ (ಹಣಕಾಸು) ಜಯರಾಮ ರಾಯಪುರ ಮಾತನಾಡಿ, ‘ಇಂದಿರಾ ಕ್ಯಾಂಟೀನ್ ಸೌಲಭ್ಯವನ್ನು ಎಲ್ಲ 243 ವಾರ್ಡ್ ಗಳಿಗೂ ವಿಸ್ತರಿಸಬೇಕು, ಜೊತೆಗೆ ಗುಣಮಟ್ಟದ ಉಪಹಾರ ನೀಡಿ ಅದರ ಪ್ರಮಾಣ ಹೆಚ್ಚಿಸಬೇಕು’ ಎಂದರು.

ಪಾಲಿಕೆ ಕ್ಯಾಂಟೀನ್‌ಗಳಿಗೆ ಮರು ಟೆಂಡರ್ ಪ್ರಕ್ರಿಯೆ ಆರಂಭಿಸಲಿದೆ ಎಂದು ಇದೇ ವೇಳೆ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com