ಖ್ಯಾತ ವಿಮರ್ಶಕ ಜಿ. ಹೆಚ್. ನಾಯಕ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಕನ್ನಡದ ಖ್ಯಾತ ಲೇಖಕ ಹಾಗೂ  ವಿಮರ್ಶಕ ಜಿ.ಹೆಚ್ ನಾಯಕ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.  
ವಿಮರ್ಶಕ ಜಿ.ಹೆಚ್.ನಾಯಕ್
ವಿಮರ್ಶಕ ಜಿ.ಹೆಚ್.ನಾಯಕ್
Updated on

ಬೆಂಗಳೂರು: ಕನ್ನಡದ ಖ್ಯಾತ ಲೇಖಕ ಹಾಗೂ ವಿಮರ್ಶಕ ಜಿ.ಹೆಚ್ ನಾಯಕ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.  

ಕನ್ನಡ ಸಾಹಿತ್ಯದ ವಿಮರ್ಶೆ, ವಿಶ್ಲೇಷಣೆ ಹಾಗೂ ಬರಹಲೋಕದ ಅಪರೂಪದ ವ್ಯಕ್ತಿ. ಪ್ರಗತಿಪರ ಚಿಂತಕರು,  ಸೌಜನ್ಯಶೀಲ,   ನಿಷ್ಠುರ ವಿಮರ್ಶಕರಾದ ನಾಯಕ್ ಅವರು ಪೂರ್ವಾಗ್ರಹವಿಲ್ಲದ ಅಪ್ಪಟ ಮಾನವೀಯ ಮನಸ್ಸುಳ್ಳವರಾಗಿದ್ದರು. ನಾಯಕ್ ಅವರು  ಮೈಸೂರು ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾಗಿ ಸಲ್ಲಿಸಿದ ಸೇವೆ ಅನನ್ಯ. ಹಂಪಿ  ಹಾಗೂ ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕಾವ್ಯಾಧ್ಯಯನ ಪೀಠದ ಸಂದರ್ಶ ಪ್ರಾಧ್ಯಾಪಕರಾಗಿಯೂ ಅವರ ಸೇವೆ ಗಮನಾರ್ಹವಾಗಿದೆ.  
  
ಸಮಕಾಲೀನ, ಅನಿವಾರ್ಯ ನಿರಪೇಕ್ಷ ಸೇರಿದಂತೆ ಹಲವಾರು ವಿಮರ್ಶಾ ಕೃತಿಗಳು  ಹಾಗೂ ಸಾಹಿತ್ಯ ಕೃತಿಗಳನ್ನು ಸಂಪಾದಿಸಿದ ಅವರು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅತ್ಯುತ್ತಮ ಸಾಹಿತ್ಯ ವಿಮರ್ಶೆ ಪ್ರಶಸ್ತಿಯನ್ನು ಒಳಗೊಂಡಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕದ ಪ್ರಖರ ಚಿಂತರಕೊಬ್ಬರನ್ನು  ಕಳೆದುಕೊಂಡಂತಾಗಿದೆ.  ಅವರ ಆತ್ಮಕ್ಕೆ ಶಾಂತಿ ದೊರೆಯಲಿ. ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ದೇವರು  ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com