ಸಚಿವ ಸಂಪುಟ ವಿಸ್ತರಣೆ ಕಸರತ್ತು: ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ
ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಭೇಟಿಯಾದರು.
ಸಿಎಂ ಜೊತೆ ರಾಜ್ಯ ಸಚಿವ ಬಿಝಡ್ ಜಮೀರ್ ಅಹಮದ್ ಖಾನ್, ಶಾಸಕ ಬೈರತಿ ಸುರೇಶ್ ಇದ್ದರು.
ನವದೆಹಲಿಯಲ್ಲಿ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಬರ್ಟ್ ವಾದ್ರಾ ಅವರನ್ನು ಭೇಟಿ ಮಾಡಲಾಯಿತು. ಈ ವೇಳೆ ಸಚಿವರಾದ ಜಮೀರ್ ಅಹಮದ್ ಖಾನ್, ಶಾಸಕರಾದ ಬೈರತಿ ಸುರೇಶ್ ಇದ್ದರು ಎಂದು ಸಚಿವ ಎಂಟಿ ಪಾಟೀಲ್ ಟ್ವೀಟ್ ಮಾಡಿದ್ದಾರೆ.
ಮೇ 24ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ಆಗಮಿಸಿ ಸಚಿವ ಸಂಪುಟ ವಿಸ್ತರಣೆ ಕುರಿತು ಪಕ್ಷದ ಉನ್ನತ ನಾಯಕರೊಂದಿಗೆ ಚರ್ಚಿಸಿದ್ದರು.
ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚರ್ಚೆಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಮುಖ್ಯಸ್ಥ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಮತ್ತು ಎಐಸಿಸಿ ಈ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದರು.
ಎಎನ್‌ಐ ಜೊತೆ ಮಾತನಾಡಿದ ಅವರು, ಆ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ತಿಳಿಸಲಿದ್ದು, ಪಕ್ಷದ ಅಧ್ಯಕ್ಷನಾಗಿ ನಾನು ಖಂಡಿತವಾಗಿಯೂ ದೆಹಲಿಗೆ ಹೋಗುತ್ತೇನೆ ಎಂದು ಹೇಳಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ಹಲವು ನಂತರ, ಕಾಂಗ್ರೆಸ್ ತನ್ನ ಸಿಎಂ ಅಭ್ಯರ್ಥಿಯನ್ನು ಅಂತಿಮಗೊಳಿಸಿಕು. ಕರ್ನಾಟಕದಲ್ಲಿ ಸಿಎಲ್‌ಪಿ ನಾಯಕರಾಗಿ ಸಿಎಂ ಸಿದ್ದರಾಮಯ್ಯ ಅವಿರೋಧವಾಗಿ ಆಯ್ಕೆಯಾದರು.
ಮೇ 20 ರಂದು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು.
224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 10 ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗಳಿಸಿ ಆಡಳಿತಾರೂಢ ಬಿಜೆಪಿಯನ್ನು ಅಧಿಕಾರದಿಂದ ಹೊರಹಾಕಿತು. ಬಿಜೆಪಿ ಕೇವಲ 66 ಸ್ಥಾನಗಳನ್ನು ಗಳಿಸಿ ವಿರೋಧ ಪಕ್ಷದ ಸ್ಥಾನ ಪಡೆದುಕೊಂಡಿತು.