ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ

'ಸಮಾಜದಲ್ಲಿ ಶಾಂತಿ ಕದಡಲು ಒಮ್ಮೆ ಪ್ರಯತ್ನಿಸಿ ನೋಡಿ...': ಬಿಜೆಪಿಗರಿಗೆ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಕರ್ನಾಟಕದಲ್ಲಿ ಹೊಸದಾಗಿ ರಚನೆಯಾದ ಕಾಂಗ್ರೆಸ್ ಸರ್ಕಾರದ ಕ್ಯಾಬಿನೆಟ್‌ನಲ್ಲಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ, ರಾಜ್ಯದಲ್ಲಿ ಶಾಂತಿ ಕದಡಲು ಪ್ರಯತ್ನಿಸುವವರ ವಿರುದ್ಧ ನಿರ್ಣಾಯಕ ಕ್ರಮ ಕೈಗೊಳ್ಳುವುದಾಗಿ ಪ್ರಿಯಾಂಕ್ ಖರ್ಗೆ ತಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಪುನರುಚ್ಚರಿಸಿದ್ದಾರೆ.
Published on

ಬೆಂಗಳೂರು: ಕರ್ನಾಟಕದಲ್ಲಿ ಹೊಸದಾಗಿ ರಚನೆಯಾದ ಕಾಂಗ್ರೆಸ್ ಸರ್ಕಾರದ ಕ್ಯಾಬಿನೆಟ್‌ನಲ್ಲಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ, ರಾಜ್ಯದಲ್ಲಿ ಶಾಂತಿ ಕದಡಲು ಪ್ರಯತ್ನಿಸುವವರ ವಿರುದ್ಧ ನಿರ್ಣಾಯಕ ಕ್ರಮ ಕೈಗೊಳ್ಳುವುದಾಗಿ ಪ್ರಿಯಾಂಕ್ ಖರ್ಗೆ ತಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಪುನರುಚ್ಚರಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟಕ್ಕೆ ಸಚಿವರಾಗಿ ಸೇರ್ಪಡೆಗೊಂಡ ಪ್ರಿಯಾಂಕ್ ಖರ್ಗೆ ಅವರಿಗೆ ಇನ್ನೂ ಖಾತೆ ಹಂಚಿಕೆಯಾಗಿಲ್ಲ.

ಈ ಕುರಿತು ಟ್ವೀಟ್ ಮಾಡಿರುವ ಖರ್ಗೆ, 'ಬಿಜೆಪಿಗರು, ಪದೇ ಪದೇ, ಆರ್‌ಎಸ್ಎಸ್ ಬ್ಯಾನ್ ಮಾಡಿ ನೋಡಿ ಅಂತಿದಾರೆ. ಇಷ್ಟು ದಿನ ಕುರುಡರ ಆಡಳಿತದಲ್ಲಿ ಆಟವಾಡಿದ ಹಾಗಲ್ಲಾ. ಈಗ ಒಂದೇ ಒಂದು ಬಾರಿ ಸಮಾಜದಲ್ಲಿ ಶಾಂತಿ ಕದಡುವ, ಹೆಣದ ಮೇಲೆ ರಾಜಕೀಯ ಬೇಳೆ ಬೇಯಿಸುವ, ಅಸಂವಿಧಾನಿಕ ಚಟುವಟಿಕೆ ಮಾಡುವ ಪ್ರಯತ್ನ ಮಾಡಿ ನೋಡಿ. ಆಗ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಪವರ್ ನಾವು ತೋರಿಸುತ್ತೇವೆ' ಎಂದಿದ್ದಾರೆ.

ಈ ಹಿಂದೆ ಮೇ 25 ರಂದು, ಕರ್ನಾಟಕದಲ್ಲಿ ಯಾವುದೇ ಧಾರ್ಮಿಕ, ರಾಜಕೀಯ ಅಥವಾ ಸಾಮಾಜಿಕ ಸಂಘಟನೆಗಳು ಅತೃಪ್ತಿ ಮತ್ತು ಸಾಮರಸ್ಯ ಕದಡುವ ಬೀಜಗಳನ್ನು ಬಿತ್ತಲು ಹೊರಟರೆ ಅದನ್ನು ಸಹಿಸುವುದಿಲ್ಲ. ನಾವು ಅವರನ್ನು ಕಾನೂನಾತ್ಮಕವಾಗಿ ಮತ್ತು ಸಾಂವಿಧಾನಿಕವಾಗಿ ಎದುರಿಸುತ್ತೇವೆ. ಅದು ಬಜರಂಗದಳ, ಪಿಎಫ್‌ಐ ಅಥವಾ ಇನ್ನಾವುದೇ ಸಂಘಟನೆಯಾಗಿರಲಿ. ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತಂದರೆ ನಾವು ಅವರನ್ನು ನಿಷೇಧಿಸಲು ಹಿಂಜರಿಯುವುದಿಲ್ಲ ಎಂದಿದ್ದರು. 

ಕರ್ನಾಟಕದಲ್ಲಿ ಹಿಜಾಬ್ ನಿಷೇಧವನ್ನು ಹಿಂಪಡೆಯುವ ಕುರಿತು ಮಾತನಾಡಿದ ಪ್ರಿಯಾಂಕ್ ಖರ್ಗೆ, ಜನರ ಪರವಾಗಿಲ್ಲದ ಅಥವಾ ಅಸಾಂವಿಧಾನಿಕವಾದ ಯಾವುದೇ ಮಸೂದೆಯನ್ನು ಪಕ್ಷವು ಪರಿಶೀಲಿಸುತ್ತದೆ ಮತ್ತು ಅಗತ್ಯವಿದ್ದರೆ ತಿರಸ್ಕರಿಸುತ್ತದೆ ಎಂದು ಹೇಳಿದರು.

ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಜಾತಿ ಮತ್ತು ಧರ್ಮದ ಆಧಾರದ ಮೇಲೆ ಸಮುದಾಯಗಳ ನಡುವೆ ದ್ವೇಷವನ್ನು ಹರಡುವ ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ದೃಢ ಮತ್ತು ನಿರ್ಣಾಯಕ ಕ್ರಮ ತೆಗೆದುಕೊಳ್ಳಲು ಪಕ್ಷ ಬದ್ಧವಾಗಿದೆ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com