ಕುಷ್ಟಗಿ ಅಪಘಾತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಣೆ ಮಾಡಲಾಗಿದೆ.
ಕುಷ್ಟಗಿ ತಾಲ್ಲೂಕು ವ್ಯಾಪ್ತಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯ ಕಲಕೇರಿ ಬಳಿ ಭಾನುವಾರ ಸಂಜೆ ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ತಲಾ 2ಲಕ್ಷ ಪರಿಹಾರ ಘೋಷಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎಳೆಯ ಮಕ್ಕಳು ಸೇರಿದಂತೆ 6 ಮಂದಿ ಸಾವಿಗೀಡಾದ ಸುದ್ದಿ ತಿಳಿದು ಎದೆ ನಲುಗಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮೃತ ದುರ್ದೈವಿಗಳ ಕುಟುಂಬಕ್ಕೆ ಸರ್ಕಾರದಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು. ಅತಿಯಾದ ವೇಗ, ಅಜಾಗರೂಕತೆಗಳೆ ಇಂಥ ಅಪಘಾತಗಳಿಗೆ ಕಾರಣ, ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ, ಸುರಕ್ಷಿತವಾಗಿರಿ ಎಂದು ಸಿಎಂ ತಿಳಿಸಿದ್ದಾರೆ.
‘ವೇಗವಾಗಿ ಬರುತ್ತಿದ್ದ ಕಾರಿನ ಟಯರ್ ಸಿಡಿದು ರಸ್ತೆ ವಿಭಜಕ ದಾಟಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ’ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


