ತುಮಕೂರು: 70 ವರ್ಷದ ವೃದ್ಧೆ ಮೇಲೆ ಸಾಮೂಹಿಕ ಅತ್ಯಾಚಾರ!

70 ವರ್ಷದ ವೃದ್ಧೆಯೊಬ್ಬರ ಮೇಲೆ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ತುಮಕೂರು ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ತುಮಕೂರು: 70 ವರ್ಷದ ವೃದ್ಧೆಯೊಬ್ಬರ ಮೇಲೆ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ತುಮಕೂರು ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮೇ 21ರ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಶನಿವಾರ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ಕುಮಾರ್ ಶಹಾಪುರವಾಡ್ ಮಾಹಿತಿ ನೀಡಿದ್ದಾರೆ.

ಮೊಮ್ಮಗಳ ವಿವಾಹ ಕಾರ್ಯಕ್ರಮಕ್ಕೆ ಬಂದ ಅಳಿಯನ ಸ್ನೇಹಿತರು ರಾಜೇಶ್ ಮತ್ತು ಮಂಜುನಾಥ್ ಆರೋಪಿಗಳೆಂದು ಗುರುತಿಸಲಾಗಿದೆ. ಇಬ್ಬರು ಕುಣಿಗಲ್ ಮೂಲದವರೆಂದು ಪತ್ತೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಎಣ್ಣೆ ಪಾರ್ಟಿ ಮಾಡಿದ್ದ ಇಬ್ಬರೂ ರಾತ್ರಿ ವೇಳೆ ಅಜ್ಜಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ. ಅಸ್ವಸ್ಥೆಯಾಗಿದ್ದ ವೃದ್ಧೆಗೆ ಕುಣಿಗಲ್ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ‌‌ ಕೊಡಿಸಲಾಗಿದೆ. ಇದೀಗ ವೃದ್ಧೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ವೃದ್ಧೆಯ ಅಳಿಯ ನೀಡಿದ ದೂರಿನ ಮೇಲೆಗೆ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com