ಮುಂಗಾರು ಹಂಗಾಮಿನ ವಿಪತ್ತು ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿ: ಅಧಿಕಾರಿಗಳಿಗೆ ಸೂಚನೆ

ಪೂರ್ವ ಮುಂಗಾರು ಸೇರಿದಂತೆ 2023ನೇ ಸಾಲಿನ ಮುಂಗಾರು ಹಂಗಾಮಿನ ಮಳೆ, ಪ್ರವಾಹ ಪರಿಸ್ಥಿತಿ ಎದುರಿಸಲು ಈಗಿನಿಂದಲೇ ಸನ್ನದ್ಧರಾಗಬೇಕು. ಇದಕ್ಕೆ ಬೇಕಾದ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕೊಪ್ಪಳ: ಪೂರ್ವ ಮುಂಗಾರು ಸೇರಿದಂತೆ 2023ನೇ ಸಾಲಿನ ಮುಂಗಾರು ಹಂಗಾಮಿನ ಮಳೆ, ಪ್ರವಾಹ ಪರಿಸ್ಥಿತಿ ಎದುರಿಸಲು ಈಗಿನಿಂದಲೇ ಸನ್ನದ್ಧರಾಗಬೇಕು. ಇದಕ್ಕೆ ಬೇಕಾದ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ್ ಹಾಲ್ ನಲ್ಲಿ ತಹಸೀಲ್ದಾರರು, ತಾಪಂ ಕಾರ್ಯನಿರ್ವಹಣಾಧಿಕಾರಿಗಳು, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಪಶುಪಾಲನೆ, ಕೃಷಿ, ಜೆಸ್ಕಾಂ, ಅಗ್ನಿಶಾಮಕ ಇಲಾಖೆಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು.

ಈಗಾಗಲೇ ಬೇಸಿಗೆಯು ಮುಗಿಯುವ ಹಂತಕ್ಕೆ ಬಂದಿದ್ದು, ಬಿಸಿಲು ದಿನೇದಿನೆ ತಗ್ಗುತ್ತ ವಾತಾವರಣ ಬದಲಾಗುತ್ತಿದೆ. ಗಾಳಿ ಮಿಶ್ರಿತ ಗುಡುಗು ಸಿಡಿಲು ಮಳೆಗಳು ಬೀಳಲಾರಂಭಿಸಿವೆ. ಆದ್ದರಿಂದ ಮುಂಗಾರು ಹಂಗಾಮಿನ ಅವಧಿಯಲ್ಲಿ ವಿಪತ್ತುಗಳಿಂದ ಜೀವಹಾನಿ ಮತ್ತು ಇತರೆ ನಷ್ಟ ಉಂಟಾದಲ್ಲಿ ವಿಳಂಬವಿಲ್ಲದೇ ಪರಿಹಾರ ವಿತರಣೆಗೆ ಕ್ರಮ ವಹಿಸಲು ಎಲ್ಲಾ ರೀತಿಯಿಂದ ಸನ್ನದ್ಧರಾಗಬೇಕು ಎಂದು ಸೂಚಿಸಿದರು.

ಮಳೆಗಾಲದ ಸಂದರ್ಭದಲ್ಲಿ ಸಿಡಿಲು ಬಡಿದು, ಮರಬಿದ್ದು, ಮನೆಕುಸಿದು, ಪ್ರವಾಹಕ್ಕೆ ಸಿಲುಕಿ ಮಾನವ ಹಾಗೂ ಜಾನುವಾರುಗಳ ಜೀವ ಹಾನಿಯಾದಲ್ಲಿ ತಹಸೀಲ್ದಾರರು ಖುದ್ದು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರೀಶೀಲಿಸಿ ಕಾಲಮಿತಿಯೊಳಗೆ ಸಂತ್ರಸ್ಥರಿಗೆ ಪರಿಹಾರ ಸಿಗವಂತೆ ಕ್ರಮ ವಹಿಸಿ ಜನತೆಗೆ ಸ್ಪಂದನೆ ನೀಡಬೇಕು.

ಮನೆಗಳಿಗೆ ಹಾನಿಯಾದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿಯಿಂದ ಮತ್ತು ನಗರ ಪ್ರದೇಶಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸಮೀಕ್ಷೆ ನಡೆಸಿ ಹಾನಿಯಾಗಿರುವುದನ್ನು ಸರಿಯಾಗಿ ಗುರುತಿಸಿ ಸಂಬಂಧಿಸಿದ ತಹಸೀಲ್ದಾರಗೆ ವರದಿ ಮಾಡಬೇಕು. ತಹಸೀಲ್ದಾರರಿಂದ ವರದಿ ಬಂದ ನಂತರ ಮಾರ್ಗಸೂಚಿಯನುಸಾರ ಸಂತ್ರಸ್ಥರಿಗೆ ಪರಿಹಾರ ವಿತರಣೆಗೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com