ಬೆಳಗಾವಿ: ಕನ್ನಡಿಗರಿಂದ ರಾಜ್ಯೋತ್ಸವ ಸಂಭ್ರಮಾಚರಣೆಯಾದರೆ ಎಂಇಎಸ್ ನಿಂದ ಕರಾಳ ದಿನ ಆಚರಣೆ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಇಂದು ನವೆಂಬರ್ 1 ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುತ್ತಿದ್ದರೆ ಕನ್ನಡ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಎಂಇಎಸ್(Maharashtra Ekikarana Samiti) ಸಂಘಟನೆ ಕರಾಳ ದಿನ ಆಚರಿಸುತ್ತಿದೆ. ಬೆಳಗಾವಿಯ ಸಂಭಾಜಿ ಉದ್ಯಾನದಿಂದ ಮೆರವಣಿಗೆ ಆರಂಭವಾಗಿದೆ. ಕಪ್ಪು ಬಟ್ಟೆ ಧರಸಿ ನೂರಾರು ಜನ ಎಂಇಎಸ್ ಪುಂಡರು ಮೆರವಣಿಗೆಯಲ್ಲಿ ಭಾಗಿಯಾಗಿ
ಮಹಾರಾಷ್ಟ್ರ ಏಕೀಕರಣ ಸಮಿತಿ ಕಾರ್ಯಕರ್ತರಿಂದ ಕರಾಳ ದಿನ ಆಚರಣೆ
ಮಹಾರಾಷ್ಟ್ರ ಏಕೀಕರಣ ಸಮಿತಿ ಕಾರ್ಯಕರ್ತರಿಂದ ಕರಾಳ ದಿನ ಆಚರಣೆ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಇಂದು ನವೆಂಬರ್ 1 ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುತ್ತಿದ್ದರೆ ಕನ್ನಡ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಎಂಇಎಸ್(Maharashtra Ekikarana Samiti) ಸಂಘಟನೆ ಕರಾಳ ದಿನ ಆಚರಿಸುತ್ತಿದೆ.
ಬೆಳಗಾವಿಯ ಸಂಭಾಜಿ ಉದ್ಯಾನದಿಂದ ಮೆರವಣಿಗೆ ಆರಂಭವಾಗಿದೆ. ಕಪ್ಪು ಬಟ್ಟೆ ಧರಸಿ ನೂರಾರು ಜನ ಎಂಇಎಸ್ ಪುಂಡರು ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ. ನಾಡದ್ರೋಹಿ ಘೋಷಣೆ ಕೂಗುತ್ತಿದ್ದಾರೆ. ಭಾರಿ ಪೊಲೀಸ್ ಬಂದೋಬಸ್ತ್ ನಲ್ಲಿ ಎಂಇಎಸ್ ಮೆರವಣಿಗೆ ನಡೆಯುತ್ತಿದೆ. ಆದರೆ ಜಿಲ್ಲಾಡಳಿತ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. 

ಎಂಇಎಸ್ ಕರಾಳ ದಿನಾಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಿಸಿತ್ತು. ನಿಷೇಧದ ನಡುವೆಯೂ ಪೊಲೀಸ್ ಭದ್ರತೆಯಲ್ಲಿ ಕರಾಳ ದಿನ ಆಚರಿಸಲಾಗುತ್ತಿದೆ. ಕರಾಳ ದಿನಾಚರಣೆ ಮಾಡಲು ಬಿಡುವುದಿಲ್ಲ ಎಂದ ಪೊಲೀಸರೇ ಭದ್ರತೆ ನೀಡಿದ್ದಾರೆ. ಪೊಲೀಸರ ಸಮ್ಮುಖದಲ್ಲಿ ನಾಡದ್ರೋಹಿ ಘೋಷಣೆ ಕೂಗಿ ಎಂಇಎಸ್ ಪುಂಡಾಟ ಮೆರೆಯುತ್ತಿದೆ. ಬೆಳಗಾವಿ, ಕಾರವಾರ, ನಿಪ್ಪಾಣಿ ಸಂಯುಕ್ತ ಮಹಾರಾಷ್ಟ್ರ ಆಗಲೇಬೇಕು ಅಂತಾ ಘೋಷಣೆ ಕೂಗಲಾಗುತ್ತಿದೆ. ಅನುಮತಿ ನೀಡುವುದಿಲ್ಲ ಎಂದಿದ್ದ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ನಾಡದ್ರೋಹಿಗಳಿಗೆ ರಕ್ಷಣ ನೀಡಿ ಕೈ ಕಟ್ಟಿ ಕುಳಿತಿದೆ.

ಕರಾಳ ದಿನಕ್ಕೆ ಅವಕಾಶ ಇಲ್ಲ ಎಂದು ಹೇಳಿದ್ದ ಡಿಸಿ ಮತ್ತು ಕಮಿಷನರ್, ಈಗ ಎಂಇಎಸ್ ಪುಂಡರಿಗೆ ಭದ್ರತೆ ನೀಡಿ ಮೆರವಣಿಗೆಗೆ ಅವಕಾಶ ಕೊಟ್ಟಿದ್ದಾರೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಇಬ್ಬಗೆಯ ನೀತಿಗೆ ಕನ್ನಡಿಗರು ಆಕ್ರೋಶ ಹೊರ ಹಾಕಿದ್ದಾರೆ. ಕನ್ನಡದ ನೆಲದಲ್ಲಿದ್ರೂ ನಾಡದ್ರೋಹಿ ಘೋಷಣೆ ಕೂಗಿ ಎಂಇಎಸ್ ಪುಂಡಾಟ ಮೆರೆಯುತ್ತಿದೆ. ಇದಕ್ಕೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಪರೋಕ್ಷವಾಗಿ ಸಪೋರ್ಟ್ ಮಾಡುತ್ತಿದ್ದು ರಾಜಕೀಯ ಒತ್ತಡಕ್ಕೆ ಮಣಿದು ಸುಮ್ಮನಾದ್ರಾ ಎಂಬ ಮಾತುಗಳು ಕೇಳಿ ಬರುತ್ತಿವೆ. ಕರಾಳ ದಿನಾಚರಣೆ ಬಂದ್ ಮಾಡುವ ಪವರ್ ಇದ್ರೂ ಪೊಲೀಸ್ ಇಲಾಖೆ ಸೈಲೆಂಟ್ ಆಗಿದೆ ಎಂದು ಕನ್ನಡಿಗರು ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com