ಜಯನಗರ ವಾಣಿಜ್ಯ ಸಂಕೀರ್ಣ: ಪಾದಚಾರಿ ಒತ್ತುವರಿ ತೆರವುಗೊಳಿಸುವಂತೆ ಬಿಬಿಎಂಪಿ ಸೂಚನೆ

ಜಯನಗರ ವಾಣಿಜ್ಯ ಸಂಕೀರ್ಣ ಹಾಗೂ ಸದರಿ ಸಂಕೀರ್ಣಕ್ಕೆ ಹೊಂದಿಕೊಂಡಂತಿರುವ ಸುತ್ತ-ಮುತ್ತಲಿನ ಪ್ರದೇಶವನ್ನು ಬುಧವಾರ ಪರಿಶೀಲಿಸಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಪಾದಚಾರಿ ಮಾರ್ಗ ಒತ್ತುವರಿಯಾಗಿರುವುದನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌

ಬೆಂಗಳೂರು: ಜಯನಗರ ವಾಣಿಜ್ಯ ಸಂಕೀರ್ಣ ಹಾಗೂ ಸದರಿ ಸಂಕೀರ್ಣಕ್ಕೆ ಹೊಂದಿಕೊಂಡಂತಿರುವ ಸುತ್ತ-ಮುತ್ತಲಿನ ಪ್ರದೇಶವನ್ನು ಬುಧವಾರ ಪರಿಶೀಲಿಸಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಪಾದಚಾರಿ ಮಾರ್ಗ ಒತ್ತುವರಿಯಾಗಿರುವುದನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಯನಗರ ವಾಣಿಜ್ಯ ಸಂಕೀರ್ಣದ ಒಳ ಭಾಗದಲ್ಲಿ ವ್ಯಾಪಾರ ನಡೆಸುತ್ತಿರುವ ಮಳಿಗೆದಾರರು ಅನಧಿಕೃತವಾಗಿ ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಈ ಕೂಡಲೇ ತೆರವಿಗೆ ಕ್ರಮ ಕೈಗೊಳ್ಳುವಂತೆ ಹೇಳಿದರು.

ಜಯನಗರ ವಾಣಿಜ್ಯ ಸಂಕೀರ್ಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ಬದಿಯ ವ್ಯಾಪಾರಿಗಳು ರಸ್ತೆ ಹಾಗೂ ಪಾದಚಾರಿ ಮಾರ್ಗವನ್ನು ಒತ್ತುವರಿಪಡಿಸಿಕೊಂಡಿದ್ದಾರೆ. ಒತ್ತುವರಿಯನ್ನು ತೆರವುಗೊಳಿಸಲು ಹಾಗೂ ಅನಧಿಕೃತವಾಗಿ ವ್ಯಾಪಾರ ವಹಿವಾಟು ನಡೆಸುತ್ತಿರುವವರನ್ನು ಗುರುತಿಸಬೇಕು. ಇದರೊಂದಿಗೆ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ಮಳಿಗೆಗಳನ್ನು ತೆರವುಗೊಳಿಸಲು ಕ್ರಮ ವಹಿಸಬೇಕು ಎಂದು ತಿಳಿಸಿದರು.

‘ಜಯನಗರ ಶಾಪಿಂಗ್ ಕಾಂಪ್ಲೆಕ್ಸ್‌ ನೆಲಮಾಳಿಗೆಯಲ್ಲಿ ಅಕ್ರಮವಾಗಿ ನಿರ್ಮಿಸಿದ ಮಳಿಗೆಗಳನ್ನು ತೆರವುಗೊಳಿಸುವಂತೆ ಸೂಚಿಸಿ ಮೂರು ವರ್ಷಗಳ ಹಿಂದೆ ಹೈಕೋರ್ಟ್‌ ಹೊರಡಿಸಿದ್ದ ಆದೇಶವನ್ನು ಪಾಲನೆ ಮಾಡಿಲ್ಲ’ ಎಂಬ ಆರೋಪದ ಹಿನ್ನೆಲೆಯಲ್ಲಿ ತುಷಾರ್‌ ಗಿರಿನಾಥ್‌ ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿತ್ತು.

ಇದರಂತೆ ಜಯನಗರ ವಾಣಿಜ್ಯ ಸಂಕೀರ್ಣದ ಮೀನು ಮಾರುಕಟ್ಟೆಯ ಸುತ್ತಲಿನ ಪ್ರದೇಶಗಳನ್ನು ಮಂಗಳವಾರ ಪರಿಶೀಲಿಸಿದ ತುಷಾರ್‌ ಗಿರಿನಾಥ್‌, ವಿದ್ಯುತ್ ದೀಪಗಳನ್ನು ಅಳವಡಿಸಿ, ಅನಧಿಕೃತ ಪ್ರವೇಶ ನಿರ್ಬಂಧಗೊಳಿಸಲು ಕ್ರಮವಹಿಸಲು ಸೂಚಿಸಿದರು.

ಈ ಸಂದರ್ಭದಲ್ಲಿ ಶಾಸಕ ಸಿ.ಕೆ.ರಾಮಮೂರ್ತಿ, ದಕ್ಷಿಣ ವಲಯದ ವಲಯ ಆಯುಕ್ತೆ ವಿನೋತ್ ಪ್ರಿಯಾ, ಜಂಟಿ ಆಯುಕ್ತ ಕೆ. ಜಗದೀಶ್ ನಾಯ್ಕ್, ಮುಖ್ಯ ಎಂಜಿನಿಯರ್‌ ರಾಜೇಶ್ ಇದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com