68ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: ಎಲ್ಲೆಡೆ ಹರಡಿದ ಕನ್ನಡದ ಕಂಪು, ಕಂಠೀರವ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆ

ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ರಾಜ್ಯೋತ್ಸವ ಆಚರಣೆಗೆ ನಗರದ ಕಂಠೀರವ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಹಲವು ಜನರು ಆಗಮಿಸುವ ಹಿನ್ನೆಲೆಯಲ್ಲಿ ಸ್ಟೇಡಿಯಂ ಸುತ್ತಮುತ್ತಲೂ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ರಾಜ್ಯೋತ್ಸವ ಆಚರಣೆಗೆ ನಗರದ ಕಂಠೀರವ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಹಲವು ಜನರು ಆಗಮಿಸುವ ಹಿನ್ನೆಲೆಯಲ್ಲಿ ಸ್ಟೇಡಿಯಂ ಸುತ್ತಮುತ್ತಲೂ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.

ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಧ್ವಜಾರೋಹಣ ಮಾಡಲಿದ್ದು, ನಂತರ ರಾಜ್ಯವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮ ಇರುವ ಹಿನ್ನೆಲೆ ನಗರ ಸಂಚಾರ ಪೊಲೀಸರು ಸುತ್ತಮುತ್ತಲಿನ ಕೆಲವು ರಸ್ತೆಗಳಲ್ಲಿ ವಾಹನ ನಿಲುಗಡೆಗೆ ನಿರ್ಬಂಧ ಹೇರಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಅತಿಥಿಗಳು, ಶಾಲಾ ಮಕ್ಕಳು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಕಸ್ತೂರ್ಬಾ ರಸ್ತೆ, ರಾಜಾ ರಾಮ್ ಮೋಹನ್ ರಾಯ್ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆ, ಮತ್ತು ನೃಪತುಂಗ ರಸ್ತೆಗಳಲ್ಲಿ ಬೆಳಿಗ್ಗೆ 6 ರಿಂದ ಕಾರ್ಯಕ್ರಮ ಮುಗಿಯುವ ವರೆಗೂ ವಾಹನಗಳ ಪಾರ್ಕಿಂಗ್​ಗೆ ಅನುಮತಿ ನೀಡಲಾಗಿಲ್ಲ.

ಈ ಬಗ್ಗೆ ಸಂಚಾರ ಪೊಲೀಸರು ಪ್ರಕಟಣೆ ಹೊರಡಿಸಿದ್ದು, “ಸಾರ್ವಜನಿಕರು ಪರ್ಯಾಯ ರಸ್ತೆಗಳನ್ನು ಬಳಸಲು ಮತ್ತು ಕಂಠೀರವ ಕ್ರೀಡಾಂಗಣ ಮತ್ತು ಸುತ್ತಮುತ್ತಲಿನ ರಸ್ತೆಗಳನ್ನು ತಪ್ಪಿಸುವಂತೆ ವಿನಂತಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com