ಕರ್ನಾಟಕದಲ್ಲಿ ಅನಿವಾಸಿ ಭಾರತೀಯರಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ: ಡಿಕೆ ಶಿವಕುಮಾರ್

ರಾಜ್ಯದಲ್ಲಿ ಹೂಡಿಕೆ ಮಾಡಲು ಬಯಸುವ ಅನಿವಾಸಿ ಭಾರತೀಯರಿಗಾಗಿ ರಾಜ್ಯ ಸರ್ಕಾರ ಪ್ರತ್ಯೇಕ ಸಚಿವಾಲಯವನ್ನು ತೆರೆಯಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಹೂಡಿಕೆ ಮಾಡಲು ಬಯಸುವ ಅನಿವಾಸಿ ಭಾರತೀಯರಿಗಾಗಿ ರಾಜ್ಯ ಸರ್ಕಾರ ಪ್ರತ್ಯೇಕ ಸಚಿವಾಲಯವನ್ನು ತೆರೆಯಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಗಳು ಅಥವಾ ಮಾನದಂಡಗಳಿಗೆ ಅನುಗುಣವಾಗಿ ಕೇರಳ ರಾಜ್ಯದಲ್ಲಿ ಸ್ಥಾಪನೆಯಾಗಿರುವಂತೆಯೇ ಇಲ್ಲಿಯೂ ಪ್ರತ್ಯೇಕ ಸಚಿವಾಲಯ ಸ್ಥಾಪನೆಯಾಗಲಿದೆ. 

'ನಾವು ಅನಿವಾಸಿ ಭಾರತೀಯರಿಗೆ ಅನುಕೂಲವಾಗುವಂತೆ ಸಚಿವಾಲಯವನ್ನು ಸ್ಥಾಪಿಸುತ್ತೇವೆ. ಅವರಲ್ಲಿ ಬಹಳಷ್ಟು ಮಂದಿ ಕರ್ನಾಟಕದಲ್ಲಿ ಹೂಡಿಕೆ ಮಾಡಲು ಬಯಸುತ್ತಾರೆ. ಅವರು ತಮ್ಮ ತಾಯ್ನಾಡು ಸಮೃದ್ಧವಾಗಿರಬೇಕೆಂದು ಬಯಸುತ್ತಾರೆ' ಎಂದು ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು.

ಅನಿವಾಸಿ ಭಾರತೀಯರಿಗಾಗಿಯೇ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವುದಾಗಿ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ತನ್ನ ಪಕ್ಷದ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದೆ. ಈಗಾಗಲೇ ರಾಜ್ಯದ ಎನ್ಆರ್‌ಐ ಕೋಶದ ಉಪಾಧ್ಯಕ್ಷರನ್ನು ನೇಮಿಸಲಾಗಿದೆ ಎಂದರು.

ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಎನ್‌ಆರ್‌ಐಗಾಗಿ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸುವ ಕರಡು ಟಿಪ್ಪಣಿಯನ್ನು ಸಹ ಸಲ್ಲಿಸಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com