Tiger Attack in Mysuru: ಮೈಸೂರಿನಲ್ಲಿ ಹುಲಿ ದಾಳಿ: ರೈತ ಗಂಭೀರ, ಅರಣ್ಯ ಸಿಬ್ಬಂದಿ ಮೇಲೆ ಸ್ಥಳೀಯರಿಂದ ಹಲ್ಲೆ

ಬೆಂಗಳೂರಿನಲ್ಲಿ ಚಿರತೆ ಹಾವಳಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಅತ್ತ ಮೈಸೂರಿಲ್ಲಿ ಹುಲಿ ದಾಳಿ ಪ್ರಕರಣ ವ್ಯಾಪಕ ಆತಂಕ ಸೃಷ್ಟಿಸಿದೆ.
ಮೈಸೂರಿನಲ್ಲಿ ಹುಲಿ ದಾಳಿ (ಸಂಗ್ರಹ ಚಿತ್ರ)
ಮೈಸೂರಿನಲ್ಲಿ ಹುಲಿ ದಾಳಿ (ಸಂಗ್ರಹ ಚಿತ್ರ)

ಮೈಸೂರು: ಬೆಂಗಳೂರಿನಲ್ಲಿ ಚಿರತೆ ಹಾವಳಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಅತ್ತ ಮೈಸೂರಿಲ್ಲಿ ಹುಲಿ ದಾಳಿ ಪ್ರಕರಣ ವ್ಯಾಪಕ ಆತಂಕ ಸೃಷ್ಟಿಸಿದೆ.

ಹೌದು.. ರೈತನೋರ್ವನ ಮೇಲೆ ಹುಲಿ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಜಿಲ್ಲೆಯ ನಂಜನಗೂಡು ತಾಲೂಕು ಮಹದೇವನಗರದ ಹೊರವಲಯದಲ್ಲಿ ನಡೆದಿದೆ. ವಿಷಯ ತಿಳಿದು ಪರಿಶೀಲನೆಗೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗೆ ಗ್ರಾಮಸ್ಥರು ಥಳಿಸಿದ ಘಟನೆ ವರದಿಯಾಗಿದೆ.

ಹುಲಿದಾಳಿಗೆ ಒಳಗಾದ ರೈತನನ್ನು ವೀರಭದ್ರ ಬೋವಿ ಎಂದು ಗುರುತಿಸಲಾಗಿದ್ದು, ವೀರಭದ್ರ ಭೋವಿ ಬಂಡಿಪುರ ರಾಷ್ಟ್ರೀಯ ಉದ್ಯಾನವನದ ಸಮೀಪದ, ನಂಜನಗೂಡು ತಾಲೂಕಿನ ಮಹದೇವನಗರ ಗ್ರಾಮದ ಮತ್ತಿ ಮರದ ಜೇನುಕಟ್ಟೆಯ ಬಳಿ ದನ ಮೇಯಿಸುತ್ತಿದ್ದಾಗ ಹಸು ಹಾಗೂ ಕರುವಿನ ಮೇಲೆ ಹುಲಿ ದಾಳಿ ನಡೆಸಿದೆ. ಆಗ ಹಸುವನ್ನು ರಕ್ಷಿಸಲು ಮುಂದಾದ ವೀರಭದ್ರ ಅವರ ಮೇಲೂ ಹುಲಿ ದಾಳಿ ಮಾಡಿತ್ತು. ತೀವ್ರವಾಗಿ ಗಾಯಗೊಂಡ ವೀರಭದ್ರ ಬೋವಿಯವರನ್ನು ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ದಾಳಿ ನಡೆಸಿದ ಹುಲಿ ಕಾಡಿಗೆ ವಾಪಸ್ ತೆರಳದೇ ಗ್ರಾಮದ ಹೊರವಲಯದ ಜಮೀನಿನಲ್ಲಿ ಬೀಡು ಬಿಟ್ಟಿದೆ ಎನ್ನಲಾಗಿದೆ.

ಸ್ಥಳಕ್ಕಾಗಮಿಸಿದ ಅರಣ್ಯ ಸಿಬ್ಬಂದಿ ಮೇಲೆ ಹಲ್ಲೆ, ಶಾಸಕರ ಭೇಟಿ
ಹುಲಿ ದಾಳಿ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಮಹಾಂತೇಶ್ ವಿರುದ್ಧ ಆಕ್ರೋಶಗೊಂಡ ರೈತರು ಥಳಿಸಿದ್ದಾರೆ. ಈ ವೇಳೆ ಕೆಲವರು ಅರಣ್ಯ ಇಲಾಖೆ ಸಿಬ್ಬಂದಿ ಮಹಾಂತೇಶ್ ಅವರನ್ನು ಬಿಡಿಸಿ ಕಳುಹಿಸಿದ್ದಾರೆ. ಮಹದೇವನಗರದ ಹೊರವಲಯದಲ್ಲಿ ಪದೇ ಪದೆ ಹುಲಿ ದಾಳಿ ನಡೆಯುತ್ತಿದ್ದು ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯಾ ಇಲಾಖೆ ಸಿಬ್ಬಂದಿಗೆ ಥಳಿಸಿ ಆಕ್ರೋಶ ಹೊರ ಹಾಕಿದ್ದಾರೆ. ಗಾಯಾಳು ವೀರಭದ್ರ ಭೋವಿ ಅವರನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.


ಹುಲಿದಾಳಿಯಲ್ಲಿ ಗಾಯಗೊಂಡ ರೈತ

ನಂಜನಗೂಡು ತಾಲೂಕಿನ ಮಹದೇವ ನಗರದ ಹೊರವಲಯದಲ್ಲಿ ಹುಲಿಯ ಓಡಾಟ ಆತಂಕಕ್ಕೆ ಕಾರಣವಾಗಿದೆ. ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸ್ಥಳೀಯರ ಮೊಬೈಲ್ನಲ್ಲಿ ಹುಲಿ ಓಡಾಟದ ದೃಶ್ಯ ಸೆರೆಯಾಗಿದೆ. ಹುಲಿಯನ್ನು ನೋಡಿರುವ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದು, ಜಮೀನುಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಆದಷ್ಟು ಬೇಗ ಹುಲಿಯನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com