ಅಪಹರಣಕ್ಕೊಳಗಾಗಿದ್ದ ಬೆಂಗಳೂರಿನ ಪಿಯು ವಿದ್ಯಾರ್ಥಿ ಅರಕಲಗೂಡು ಬಳಿ ರಕ್ಷಣೆ

ಬೆಂಗಳೂರಿನ ನಾಗಾರ್ಜುನ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಚಿರಾಗ್(21)ನನ್ನು ಅಪಹರಿಸಿದ್ದ ನಾಲ್ವರು ದುಷ್ಕರ್ಮಿಗಳು ಬುಧವಾರ ಹಾಸನದ ಅರಕಲಗೂಡು ಬಳಿ ಬಿಟ್ಟು ಹೋಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹಾಸನ: ಬೆಂಗಳೂರಿನ ನಾಗಾರ್ಜುನ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಚಿರಾಗ್(21)ನನ್ನು ಅಪಹರಿಸಿದ್ದ ನಾಲ್ವರು ದುಷ್ಕರ್ಮಿಗಳು ಬುಧವಾರ ಹಾಸನದ ಅರಕಲಗೂಡು ಬಳಿ ಬಿಟ್ಟು ಹೋಗಿದ್ದಾರೆ.

ಬೆಂಗಳೂರಿನ ಯಲಹಂಕ ಪೊಲೀಸ್ ವ್ಯಾಪ್ತಿಯ ಅನಂತಪುರ ಎಕ್ಸ್‌ಟೆನ್ಶನ್‌ನ ಕೃಷ್ಣೇಗೌಡರ ಪುತ್ರ ಚಿರಾಗ್‌ನನ್ನು ದುಷ್ಕರ್ಮಿಗಳು ಅಪಹರಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಚಿರಾಗ್ ಕಾಲೇಜಿಗೆ ಹೋಗುತ್ತಿದ್ದಾಗ ವಿಳಾಸ ಕೇಳುವ ನೆಪದಲ್ಲಿ ನಾಲ್ವರು ಅಪರಿಚಿತರು ಕಾರಿನಲ್ಲಿ ಕರೆದೊಯ್ದಿದ್ದಾರೆ. ಅರಕಲಗೂಡು ಸಮೀಪದ ಶನಿವಾರಸಂತೆ ರಸ್ತೆಯಲ್ಲಿ ಮರದ ಕೆಳಗೆ ಕುಳಿತಿದ್ದ ಚಿರಾಗ್‌ ಫೋನ್ ಮಾಡಿದ ನಂತರ ಅರಕಲಗೂಡು ಪೊಲೀಸರು ರಕ್ಷಿಸಿದ್ದಾರೆ.

ಚಿರಾಗ್ ದಾರಿಹೋಕನ ಫೋನ್ ಮೂಲಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಚಿರಾಗ್‌ನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಅಪಹರಣಕಾರರು ಕೆಲವು ರಾಸಾಯನಿಕಗಳನ್ನು ಸಿಂಪಡಿಸಿದ ನಂತರ ಚಿರಾಗ್‌ನನ್ನು ಕಾರಿನಲ್ಲಿ ಕರೆದೊಯ್ದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com