KSRTC ಉದ್ಯೋಗಿಗಳಿಗೆ ವೈದ್ಯಕೀಯ ತಪಾಸಣೆ: ಜಯದೇವ ಸಂಸ್ಥೆಯೊಂದಿಗೆ ಒಪ್ಪಂದ

ಕೆಎಸ್ ಆರ್ ಟಿಸಿ ತನ್ನ ಎಲ್ಲಾ ಉದ್ಯೋಗಿಗಳಿಗೆ 10 ರೀತಿಯ ಹೃದಯ ವೈದ್ಯಕೀಯ ತಪಾಸಣೆಗಳನ್ನು ನಡೆಸಲು ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯೊಂದಿಗೆ ಗುರುವಾರ ಐದು ವರ್ಷಗಳ ಅವಧಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ.
ರಾಮಲಿಂಗಾರೆಡ್ಡಿ, ಡಾ. ಸಿ.ಎನ್. ಮಂಜುನಾಥ್
ರಾಮಲಿಂಗಾರೆಡ್ಡಿ, ಡಾ. ಸಿ.ಎನ್. ಮಂಜುನಾಥ್

ಬೆಂಗಳೂರು: ಕೆಎಸ್ ಆರ್ ಟಿಸಿ ತನ್ನ ಎಲ್ಲಾ ಉದ್ಯೋಗಿಗಳಿಗೆ 10 ರೀತಿಯ ಹೃದಯ ವೈದ್ಯಕೀಯ ತಪಾಸಣೆಗಳನ್ನು ನಡೆಸಲು ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯೊಂದಿಗೆ ಗುರುವಾರ ಐದು ವರ್ಷಗಳ ಅವಧಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಆರೋಗ್ಯವಂತ ಉದ್ಯೋಗಿಗಳು ಸಂಸ್ಥೆಗೆ ಆಸ್ತಿ ಎಂದು ಪರಿಗಣಿಸುತ್ತದೆ ಎಂದು ಕೆಎಸ್ ಆರ್ ಟಿಸಿ  ತಿಳಿಸಿದೆ.

40 ವರ್ಷಕ್ಕಿಂತ ಮೇಲ್ಪಟ್ಟ ಚಾಲಕರು, ಕಂಡಕ್ಟರ್‌ಗಳು ಮತ್ತು ಇತರ ಸಿಬ್ಬಂದಿಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗಿ ಕಂಡುಬರುತ್ತವೆ. ಪ್ರಸ್ತುತ ಕೆಎಸ್‌ಆರ್‌ಟಿಸಿಯಲ್ಲಿ 34,000 ಉದ್ಯೋಗಿಗಳಿದ್ದು, ಅದರಲ್ಲಿ 24,686 ಚಾಲಕರು ಮತ್ತು ಕಂಡಕ್ಟರ್‌ ಗಳಿದ್ದಾರೆ ಎಂದು ಕೆಎಸ್ ಆರ್ ಟಿಸಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. 

ಜಯದೇವ ಸಂಸ್ಥೆಯೊಂದಿಗೆ ಮಾಡಿಕೊಂಡಿರುವ ಒಪ್ಪಂದವು ಹೃದಯಾಘಾತವನ್ನು ಗುರುತಿಸಲು ಮತ್ತು ತಡೆಗಟ್ಟಲು ಮತ್ತು ಆ ಮೂಲಕ ನೌಕರರ ಜೀವವನ್ನು ಉಳಿಸಲು ನಿರಂತರ ಹೃದಯ ಸಂಬಂಧಿ ಮತ್ತು ಇತರ ತಪಾಸಣೆಗಳನ್ನು ಸುಗಮಗೊಳಿಸುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ

ನಿಗಮದ ಅಭಿವೃದ್ಧಿಯಲ್ಲಿ ನೌಕರರು ಪ್ರಮುಖ ಪಾತ್ರ ವಹಿಸುತ್ತಿದ್ದು, ಅವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಅವರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com