ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 65 ಸಾರ್ವಜನಿಕ ಆರೋಗ್ಯ ಕೇಂದ್ರ ತೆರೆಯಲು ಸರ್ಕಾರ ನಿರ್ಧಾರ!

'ಕಲ್ಯಾಣ ಕರ್ನಾಟಕ'ದಲ್ಲಿ 65 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್

ಬೆಂಗಳೂರು: 'ಕಲ್ಯಾಣ ಕರ್ನಾಟಕ'ದಲ್ಲಿ 65 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಕಲ್ಯಾಣ ಕರ್ನಾಟಕದಲ್ಲಿ ಸುಮಾರು 65 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೊರತೆಯಿದೆ. ಈ ಅಸಮತೋಲನವನ್ನು ಸರಿಪಡಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ಪ್ರಸಕ್ತ ವರ್ಷದಿಂದ 65 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಪ್ರಾರಂಭಿಸಲು ಯೋಜಿಸಲಾಗಿದೆ ಎಂದು ಸಚಿವರು ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದೇ ವೇಳೆ ಸಚಿವರು, ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳ ಕಟ್ಟಡ ದುರಸ್ತಿ ಮಾಡುವುದು ಸರ್ಕಾರದ ಆದ್ಯತೆಗಳಲ್ಲಿ ಒಂದಾಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com