ಮಕ್ಕಳು ಇಷ್ಟು ನಾಜೂಕಾದರೆ ಮುಂದಿನ ಜೀವನ ಎದುರಿಸುವುದು ಹೇಗೆ? ಪಾಲಕರೇ ಮಕ್ಕಳನ್ನು ಅಂಜುಬುರುಕರನ್ನಾಗಿ ಮಾಡುತ್ತಿರುವುದೇಕೆ?

ಶಾಲೆಗಳಲ್ಲಿ ಕನ್ನಡವನ್ನು ಬೋಧನಾ ಮಾಧ್ಯಮವನ್ನಾಗಿಸಲು ಸರ್ಕಾರ ಹಲವಾರು ಪ್ರಯತ್ನ ಮಾಡಿದರೂ ನ್ಯಾಯಾಲಯಗಳು ಸರ್ಕಾರಕ್ಕೆ ಸಹಕಾರ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕನ್ನಡ ರಾಜ್ಯೋತ್ಸವ ಭಾಷಣದಲ್ಲಿ ಹೇಳಿಕೆ ನೀಡಿದ್ದರು.
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Updated on

ಬೆಂಗಳೂರು: ಉನ್ನತ ಹುದ್ದೆಗಳನ್ನು ಅಲಂಕರಿಸುವ ವ್ಯಕ್ತಿಗಳು ಕೆಲವು ನಿರ್ಬಂಧಗಳನ್ನು ಪರಿಪಾಲನೆ ಮಾಬೇಕು ಎಂದು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಗುರುವಾರ ಹೇಳಿದ್ದಾರೆ.

ಶಾಲೆಗಳಲ್ಲಿ ಕನ್ನಡವನ್ನು ಬೋಧನಾ ಮಾಧ್ಯಮವನ್ನಾಗಿಸಲು ಸರ್ಕಾರ ಹಲವಾರು ಪ್ರಯತ್ನ ಮಾಡಿದರೂ ನ್ಯಾಯಾಲಯಗಳು ಸರ್ಕಾರಕ್ಕೆ ಸಹಕಾರ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕನ್ನಡ ರಾಜ್ಯೋತ್ಸವ ಭಾಷಣದಲ್ಲಿ ಹೇಳಿಕೆ ನೀಡಿದ್ದರು. ಸಿದ್ದರಾಮಯ್ಯ ಹೇಳಿಕೆ ನೀಡಿದ ಒಂದು ದಿನದ ನಂತರ ಯಾರ ಹೆಸರನ್ನೂ ಹೆಸರಿಸದೆ ಮುಖ್ಯ ನ್ಯಾಯಮೂರ್ತಿಗಳು ಚಾಟಿ ಬೀಸಿದ್ದಾರೆ.

ಸಿಬಿಎಸ್‌ಇ ಮತ್ತು ಐಸಿಎಸ್‌ಇ ಬೋರ್ಡ್ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸುವುದನ್ನು ಪ್ರಶ್ನಿಸಿ ಎಂಟು ವಿದ್ಯಾರ್ಥಿಗಳ ಪೋಷಕರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆಯ ಸಂದರ್ಭದಲ್ಲಿ, ಮುಖ್ಯ ನ್ಯಾಯಮೂರ್ತಿಗಳು ತಮ್ಮದೇ ಆದ ಉದಾಹರಣೆಯನ್ನು ಉಲ್ಲೇಖಿಸಿ, ಪ್ರಾದೇಶಿಕ ಭಾಷೆಯಲ್ಲಿ ಶಿಕ್ಷಣ ತೆಗೆದುಕೊಳ್ಳುವವರನ್ನು ಅಸಮರ್ಥರೆಂದು ಪರಿಗಣಿಸಬಾರದು ,ಮುಂದಿನ  ದಿನಗಳಲ್ಲಿ ಅವರು ತುಂಬಾ ಯಶಸ್ವಿಯಾಗಬಹುದು ಎಂದರು. ಉನ್ನತ ಹುದ್ದೆಗಳನ್ನು ಅಲಂಕರಿಸಿರುವ ವ್ಯಕ್ತಿಗಳು ವಿವೇಚನಾಯುತವಾಗಿ ನಿಯಮ ಪಾಲಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಮೌಖಿಕವಾಗಿ ಹೇಳಿದರು.

ಸೆಪ್ಟೆಂಬರ್‌ನಲ್ಲಿ ನಡೆದ ವಿಚಾರಣೆಯ ಕೊನೆಯ ದಿನಾಂಕದಂದು ನೀಡಲಾದ ಆದೇಶಕ್ಕೆ ಪ್ರತಿಯಾಗಿ ಅರ್ಜಿದಾರರ ಪರ ವಕೀಲರು  ತಮ್ಮ ಮಕ್ಕಳ ವೈಯಕ್ತಿಕ ವಿವರಗಳನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದರು. ತಮ್ಮ ಶಾಲೆಗಳಲ್ಲಿ ಮಕ್ಕಳು ಕಿರುಕುಳಕ್ಕೆ ಒಳಗಾಗಿರುವ ಕೆಲವು ನಿದರ್ಶನಗಳು ಇರುವುದರಿಂದ ಅರ್ಜಿಯಲ್ಲಿ ಪೋಷಕರು ತಮ್ಮ ಮಕ್ಕಳು ಮತ್ತು ಶಾಲೆಯ ಹೆಸರನ್ನು ಬಹಿರಂಗಪಡಿಸುವುದನ್ನು ವಿರೋಧಿಸಿದ್ದಾರೆ ಎಂದು ವಕೀಲರು ಹೇಳಿದರು.

ಈ ವಿಷಯವಾಗಿ ನ್ಯಾಯಾಲಯದ ಮುಂದೆ ಸಮಸ್ಯೆಯನ್ನು ಪ್ರಶ್ನಿಸಿರುವ ಮೊದಲ ಪೋಷಕರಲ್ಲದ ಕಾರಣ ಇದು ನ್ಯಾಯಸಮ್ಮತವಲ್ಲದ  ಎಂದು ಪೀಠ ಹೇಳಿತು. ಮಕ್ಕಳ ಹೆಸರು ರಹಸ್ಯವಾಗಿಡುವುದು ಸರಿಯಲ್ಲ, ಮಕ್ಕಳು ಇಷ್ಟು ನಾಜೂಕಿನಿಂದ ಇದ್ದರೆ ಮುಂದಿನ ಜೀವನವನ್ನು ಹೇಗೆ ಎದುರಿಸುತ್ತಾರೆ? ಪಾಲಕರು ತಮ್ಮ ಮಕ್ಕಳನ್ನು ಅಂಜುಬುರುಕರನ್ನಾಗಿ ಮಾಡುತ್ತಿದ್ದಾರೆ. ಜೀವನದಲ್ಲಿ ಹಲವಾರು ಸವಾಲುಗಳಿವೆ... ಜೀವನವು ನಿಮ್ಮ ತಾಳ್ಮೆ, ಕೌಶಲ್ಯ ಮತ್ತು ಅನುಭವ ಎಲ್ಲವನ್ನೂ ಪರೀಕ್ಷಿಸಬಹುದು ಎಂದು ನ್ಯಾಯಾಲಯ ಹೇಳಿದೆ.

ರಾಜ್ಯದ ಎಲ್ಲಾ ಶಾಲೆಗಳಲ್ಲಿ 1 ರಿಂದ 10 ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಕನ್ನಡವನ್ನು ಕಡ್ಡಾಯ ಭಾಷೆಯನ್ನಾಗಿ ಕಲಿಸುವುದನ್ನು ಕಡ್ಡಾಯಗೊಳಿಸುವ ಕನ್ನಡ ಭಾಷಾ ಕಲಿಕಾ ಕಾಯ್ದೆಯ ನಿಯಮ 3 ಅನ್ನು  ಪ್ರಶ್ನಿಸಿ ಅರ್ಜಿ ಸಲ್ಲಿಸಿದರು.

CBSE ಮತ್ತು ICSE ಬೋರ್ಡ್‌ಗಳಿಗೆ ಸಂಯೋಜಿತವಾಗಿರುವ ಶಾಲೆಗಳು, ಈಗ ಕನ್ನಡವನ್ನು ಪ್ರಥಮ, ದ್ವಿತೀಯ ಅಥವಾ ಮೂರನೇ ಭಾಷೆಯಾಗಿ ಕಲಿಸಬೇಕಾಗುತ್ತದೆ ಮತ್ತು ಇದು ವಿದ್ಯಾರ್ಥಿಗಳು ಮತ್ತು ಮಕ್ಕಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಕೆಲ ಪೋಷಕರು ಮಕ್ಕಳ ಪರವಾಗಿ ಅರ್ಜಿ ಸಲ್ಲಿಸಿದ್ದರು.

ಕನ್ನಡವನ್ನು ಒಂದು ಭಾಷೆಯಾಗಿ ಕಲಿಸುವುದನ್ನು ವಿರೋಧಿಸುವುದಿಲ್ಲ ಎಂದು ಅರ್ಜಿದಾರರು ತಿಳಿಸಿದ್ದಾರೆ. ಪ್ರತಿಯೊಂದು ರಾಜ್ಯದಲ್ಲಿಯೂ, ಪ್ರಾದೇಶಿಕ ಭಾಷೆಗಳಿಗಿಂತ ಭಿನ್ನವಾಗಿರುವ ಮಾತೃಭಾಷೆಯನ್ನು ಹೊಂದಿರುವ ನಾಗರಿಕರ ದೊಡ್ಡ ವಿಭಾಗವಿದೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ಇವರು ಸಾಮಾನ್ಯವಾಗಿ ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಾರೆ ಮತ್ತು ಸಾಮಾನ್ಯವಾಗಿ ಒಂದು ರಾಜ್ಯದಿಂದ ಇನ್ನೊಂದಕ್ಕೆ ವರ್ಗಾವಣೆಯಾಗುತ್ತಾರೆ ಮತ್ತು ಸಾಮಾನ್ಯವಾಗಿ ತಮ್ಮ ಮಕ್ಕಳನ್ನು CBSE/ICSE-ಸಂಯೋಜಿತ ಶಾಲೆಗಳಿಗೆ ಸೇರಿಸುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com