
ಹುಬ್ಬಳ್ಳಿ: ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಿಂದ ಬೆಳಗಾವಿಯ ಕರ್ನಾಟಕ ಸುವರ್ಣ ಸೌಧದಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಶುಕ್ರವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದ ಸಾರ್ವಜನಿಕರ ಭಾವನೆಗಳನ್ನು ಪ್ರತಿಧ್ವನಿಯಾಗಲಿದ್ದು, ಈ ಕುರಿತು ಸರ್ಕಾರದಿಂದ ಅಧಿಕೃತ ಘೋಷಣೆ ಹೊರಬೀಳಲಿದೆ.
ಬಹುತೇಕ ಡಿಸೆಂಬರ್ 4 ರಿಂದ ವಿಧಾನಮಂಡಲ ಅಧಿವೇಶನ ನಡೆಯುವ ಸಾಧ್ಯತೆ ಇದೆ ಎಂದರು.
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳು ಒಗ್ಗಟ್ಟಾಗಿ ಚರ್ಚೆ ನಡೆಸಲಿದ್ದು, ಮಂಡನೆಯಾಗಬಹುದಾದ ವಿಧೇಯಕಗಳ ಬಗ್ಗೆ ನಂತರ ತಿಳಿಯಲಿದೆ.‘ಸರ್ಕಾರ ಪ್ರಸ್ತಾಪಿಸಿರುವ ಮಸೂದೆಗಳನ್ನು ಮಂಡಿಸಲಾಗುವುದು’ ಎಂದು ಹೇಳಿದರು.
ಮಹಾರಾಷ್ಟ್ರ ಪರ ಸಂಘಟನೆಗಳಿಂದ ಬೆಳಗಾವಿಯಲ್ಲಿ ಯಾವುದೇ ರೀತಿಯ ಅಡ್ಡಿ ಉಂಟಾದರೆ, ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕಾಪಾಡಲು ಎಲ್ಲಾ ಸಂಘಟನೆಗಳು ಶ್ರಮಿಸಬೇಕು ಮತ್ತು ಬೆಳಗಾವಿ ಮಾದರಿಯಾಗಬೇಕು. ಅದನ್ನು ನನಸಾಗಿಸಲು ಎಲ್ಲರೂ ಸಹಕರಿಸಬೇಕು, ಬೆಳಗಾವಿಗೆ ಕೆಟ್ಟ ಹೆಸರು ತರುವ ಕೆಲಸವನ್ನು ಯಾರೂ ಮಾಡಬಾರದು ಎಂದು ಸ್ಪೀಕರ್ ಮನವಿ ಮಾಡಿದರು.
Advertisement