ಸೈಬರ್ ಸುರಕ್ಷತೆಯಲ್ಲಿ ಮೆಟಾದೊಂದಿಗೆ ಸಹಭಾಗಿತ್ವದ ಕುರಿತು ಪರಿಶೀಲನೆ: ಪ್ರಿಯಾಂಕ್ ಖರ್ಗೆ

ಸೈಬರ್ ಸುರಕ್ಷತೆ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮ ದೈತ್ಯ ಮೆಟಾದೊಂದಿಗೆ ಸಹಭಾಗಿತ್ವದ ಕುರಿತು ರಾಜ್ಯ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ಐಟಿ ಸಚಿವ ಪ್ರಿಯಾಂಕ್ ಖರ್ಗೆ...
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸೈಬರ್ ಸುರಕ್ಷತೆ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮ ದೈತ್ಯ ಮೆಟಾದೊಂದಿಗೆ ಸಹಭಾಗಿತ್ವದ ಕುರಿತು ರಾಜ್ಯ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಶನಿವಾರ ಹೇಳಿದ್ದಾರೆ.

ಇಂದು ನಗರದಲ್ಲಿ ನಡೆದ ಡಿಜಿಟಲ್ ಸುರಕ್ಷಾ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ, ಭಾರತವು ತ್ವರಿತ ಡಿಜಿಟಲ್ ಅಳವಡಿಕೆಗೆ ಸಾಕ್ಷಿಯಾಗಿದೆ. ಇದು ಆನ್‌ಲೈನ್‌ನಲ್ಲಿ ತಮ್ಮ ಯೋಗಕ್ಷೇಮವನ್ನು ಕಾಪಾಡಲು ಬಳಕೆದಾರರಿಗೆ ಸುಲಭವಾಗಿ ದೊರಕಬಹುದಾದ ಟೂಲ್‌ಗಳು ಮತ್ತು ಸಂಪನ್ಮೂಲಗಳನ್ನು ಒದಗಿಸಬೇಕಾದ ಅಗತ್ಯವಿದೆ ಎಂದರು.

ರಾಜ್ಯ ಸರ್ಕಾರ ಕ್ರಿಯಾಶೀಲವಾದ ಮತ್ತು ಮತ್ತು ಒಳಗೊಳ್ಳುವಿಕೆಯ ಡಿಜಿಟಲ್ ಪರಿಸರವನ್ನು ರಚಿಸಲು ವಿವಿಧ ಪಾಲುದಾರರು ಮತ್ತು ತಜ್ಞರೊಂದಿಗೆ ಕೆಲಸ ಮಾಡಲು ಬದ್ಧವಾಗಿದೆ ಎಂದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಡಿಜಿಟಲ್ ಮತ್ತು ಸೈಬರ್ ಸುರಕ್ಷತೆ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಮೆಟಾ ಜೊತೆ ಪಾಲುದಾರಿಕೆಯ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

ಯುವಕರು ದೋಷಪೂರಿತ ಸಾಲದ ಅಪ್ಲಿಕೇಶನ್‌ಗಳಿಗೆ ಬಲಿಯಾಗುವುದನ್ನು ಹೇಗೆ ತಡೆಯಬಹುದು ಎಂಬುದನ್ನು ತಿಳಿದುಕೊಳ್ಳಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದರು.

ಭಾರತದಲ್ಲಿ 60ಕ್ಕೂ ಹೆಚ್ಚು ಜನ ಈ ಅಕ್ರಮ ಸಾಲದ ಆ್ಯಪ್ ಗಳಿಂದಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ನಾವು ಈಗಾಗಲೇ ಅವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ ಮತ್ತು ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ 8-10 ಕ್ಕೂ ಹೆಚ್ಚು ಅಕ್ರಮ ಸಾಲದ ಅಪ್ಲಿಕೇಶನ್‌ಗಳನ್ನು ಸ್ಥಗಿತಗೊಳಿಸಿದ್ದೇವೆ" ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com