ಹಣದ ಕೊರತೆ ನಡುವಲ್ಲೂ ಅಭಿವೃದ್ಧಿ ಕಾರ್ಯ ಮುಂದುವರೆಸುವಲ್ಲಿ ಸಿದ್ದರಾಮಯ್ಯ ಸಮರ್ಥರು: ಸಚಿವ ಕೆ.ಹೆಚ್. ಮುನಿಯಪ್ಪ

ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯ ಸರ್ಕಾರ ಹಣದ ಕೊರತೆ ಎದುರಿಸುತ್ತಿದ್ದು, ಇದರ ನಡುವಲ್ಲೂ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯುವಂತೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮರ್ಥರಾಗಿದ್ದಾರೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಅವರು ಶುಕ್ರವಾರ ಹೇಳಿದರು.
ಸಚಿವ ಕೆ.ಎಚ್.ಮುನಿಯಪ್ಪ
ಸಚಿವ ಕೆ.ಎಚ್.ಮುನಿಯಪ್ಪ

ಹುಬ್ಬಳ್ಳಿ: ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯ ಸರ್ಕಾರ ಹಣದ ಕೊರತೆ ಎದುರಿಸುತ್ತಿದ್ದು, ಇದರ ನಡುವಲ್ಲೂ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯುವಂತೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮರ್ಥರಾಗಿದ್ದಾರೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಅವರು ಶುಕ್ರವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 14 ಬಾರಿ ಬಜೆಟ್‌ ಮಂಡಿಸಿದ ಖ್ಯಾತಿ ಹೊಂದಿರುವ ವ್ಯಕ್ತಿಯೊಬ್ಬರು ಮೂಲ ಲೆಕ್ಕಾಚಾರ ಮಾಡದೆ ಗ್ಯಾರಂಟಿ ಯೋಜನೆಗಳ ಜಾರಿಗೆ ತರಲು ನಿರ್ಧರಿಸಿರಲಿಲ್ಲ. ಹಣಕಾಸಿನ ಸ್ಥಿತಿಗತಿಯನ್ನು ಅರ್ಥಮಾಡಿಕೊಂಡ ನಂತರವೇ 50,000 ಕೋಟಿ ರೂಪಾಯಿಗಳ ಬಜೆಟ್ ಹಂಚಿಕೆ ಮಾಡಲಾಗಿದೆ. ಅಭಿವೃದ್ಧಿ ಕಾರ್ಯಗಳ ಮುಂದಕ್ಕೆ ಕೊಂಡೊಯ್ಯುವಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಯಾರ ಉಪದೇಶದ ಅಗತ್ಯವಿಲ್ಲ. ಇದನ್ನು ಇತಿಹಾಸವೇ ಹೇಳುತ್ತದೆ. ಪ್ರಸ್ತುತ ಎದುರಾಗಿರುವ ಆರ್ಥಿಕ ಮುಗ್ಗಟ್ಟು ತಾತ್ಕಾಲಿಕವಾಗಿದ್ದು, ಮುಂದಿನ ದಿನಗಳಲ್ಲಿ ಪರಿಹರಿಸಲಾಗುವುದು. ಆಯಾ ಇಲಾಖೆಗಳಿಗೆ ಮಂಜೂರು ಮಾಡಿದ ಹಣವನ್ನು ಹೊರತುಪಡಿಸಿ, ಇತರ ಕಾಮಗಾರಿಗಳ ಕೈಗೊಳ್ಳಲು ಹೆಚ್ಚುವರಿ ಹಣವನ್ನು ಶೀಘ್ರದಲ್ಲೇ ಮಂಜೂರು ಮಾಡಲಾಗುವುದು ಎಂದು ಹೇಳಿದರು.

ಇದೇ ವೇಳೆ ಅಧಿಕಾರ ಹಂಚಿಕೆ ಹಾಗೂ ಸಂಪುಟ ಪುನಾರಚನೆ ವಿಚಾರ ಕುರಿತು ಮಾತನಾಡಿದ ಅವರು, ಸೂಕ್ತ ಸಮಯದಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದು, ಆ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ ಎಂದು ತಿಳಿಸಿದರು.

ಎಸ್‌ಸಿಗಳಿಗೆ ಒಳಮೀಸಲಾತಿ ಕುರಿತು ಸದಾಶಿವ ಆಯೋಗದ ವರದಿ ಜಾರಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ, ಆದರೆ, ಹಿಂದಿನ ಸರ್ಕಾರದ ನಿಲುವನ್ನು ಪರಿಶೀಲಿಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com