ದೇವನಹಳ್ಳಿಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲಾಗುವುದು: ಸಚಿವ ಈಶ್ವರ್ ಖಂಡ್ರೆ

ದೇವನಹಳ್ಳಿ ಸಮೀಪದ ಅರಣ್ಯ ಪ್ರದೇಶವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಿ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಅವರು ಶನಿವಾರ ಸೂಚಿಸಿದರು.
ಸಚಿವ ಈಶ್ವರ್ ಖಂಡ್ರೆ
ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ದೇವನಹಳ್ಳಿ ಸಮೀಪದ ಅರಣ್ಯ ಪ್ರದೇಶವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಿ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಅವರು ಶನಿವಾರ ಸೂಚಿಸಿದರು.

ಶನಿವಾರ ತಮ್ಮ ಕಚೇರಿಯಲ್ಲಿ ನಡೆದ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ದೇವನಹಳ್ಳಿಯಲ್ಲಿ 400 ವರ್ಷಗಳಿಗಿಂತಲೂ ಹಳೆಯದಾದ ಹುಣಸೆ ಮರಗಳಿವೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿಯೇ ಹುಣಸೆ ತೋಪು ಇರುವುದರಿಂದ ಮರಗಳನ್ನು ಉಳಿಸಿ ಅಭಿವೃದ್ಧಿಪಡಿಸಿದರೆ ಈ ಪ್ರದೇಶ ಪ್ರವಾಸಿ ತಾಣವಾಗಲಿದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಗಿಡಮೂಲಿಕೆ ಮತ್ತು ವಿವಿಧ ಜೀವ ವೈವಿಧ್ಯ ಸಂಪನ್ಮೂಲವನ್ನು ಬಳಕೆ ಮಾಡಿಕೊಂಡು ಉತ್ಪನ್ನ ತಯಾರಿಸುವ ಕಂಪನಿಗಳು ಮಂಡಳಿಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಇನ್ನೂ ಹಲವು ಕಂಪನಿಗಳು ನೋಂದಣಿ ಮಾಡಿಕೊಂಡಿಲ್ಲ. ಈ ಕಾರಣದಿಂದ ನೋಂದಣಿಗೆ ನೀಡಿದ್ದ ಕಾಲಾವಕಾಶವನ್ನು ಎರಡು ತಿಂಗಳವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ. ಈ ಕುರಿತು ಉದ್ಯಮಗಳಿಗೆ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.

ಕರ್ನಾಟಕ ಜೀವ ವೈವಿಧ್ಯ ಮಂಡಳಿ ವತಿಯಿಂದ ನೀಡಲಾಗುವ ವಾರ್ಷಿಕ ಪ್ರಶಸ್ತಿಗಳಿಗೆ ಹೊಸದಾಗಿ ಅರ್ಜಿ ಆಹ್ವಾನಿಸಬೇಕು. ಪ್ರಶಸ್ತಿಯ ಮೊತ್ತವನ್ನು ರೂ. 25,000ದಿಂದ ರೂ. 50,000ಕ್ಕೆ ಹೆಚ್ಚಿಸಬೇಕು ಎಂದು ನಿರ್ದೇಶನ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com