Karnataka Weather: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಭಾರಿ ಮಳೆ ಸಾಧ್ಯತೆ, ಕೊಡಗು ಸೇರಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​: ಹವಾಮಾನ ಇಲಾಖೆ

ಅಕ್ಟೋಬರ್ ನಲ್ಲಿ ತೀವ್ರ ಮಳೆ ಕೊರತೆ ಎದುರಿಸಿದ್ದ ಕರ್ನಾಟಕದಲ್ಲಿ ನವೆಂಬರ್ 7ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿರುವ ಹವಾಮಾನ ಇಲಾಖೆ, ಕೊಡಗು ಸೇರಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ ಮಾಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮಳೆ
ರಾಜಧಾನಿ ಬೆಂಗಳೂರಿನಲ್ಲಿ ಮಳೆ

ಬೆಂಗಳೂರು: ಅಕ್ಟೋಬರ್ ನಲ್ಲಿ ತೀವ್ರ ಮಳೆ ಕೊರತೆ ಎದುರಿಸಿದ್ದ ಕರ್ನಾಟಕದಲ್ಲಿ ನವೆಂಬರ್ 7ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿರುವ ಹವಾಮಾನ ಇಲಾಖೆ, ಕೊಡಗು ಸೇರಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ ಮಾಡಿದೆ.

ಹೌದು.. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಈ 10 ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ನೀಡಲಾಗಿದೆ. ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ (Karnataka Weather Forecast) ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ತುಮಕೂರು ಮತ್ತು ದಾವಣಗೆರೆ, ರಾಮನಗರ ಮತ್ತು ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಳ್ಳಾರಿ, ಧಾರವಾಡ, ಹಾವೇರಿ ಮತ್ತು ಗದಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ವಿಜಯನಗರ, ಬಳ್ಳಾರಿ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಮಳೆ ಅಬ್ಬರ ಜೋರಾಗಿ ಇರಲಿದ್ದು, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಮಳೆ ಸುರಿಯುವ ಸಾಧ್ಯತೆ ಇದೆ. ಉಳಿದಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ,ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಯೆಲ್ಲೋ ಅಲರ್ಟ್‌
ನ.5 ರಂದು ಕೊಡಗಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಇನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು ಸೇರಿದಂತೆ ಹಾಸನ, ಮಂಡ್ಯ, ಮೈಸೂರು ಹಾಗೂ ಶಿವಮೊಗ್ಗದಲ್ಲೂ ಭರ್ಜರಿ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಭಾಗಮಂಡಲ,ಹಾರಂಗಿ, ಸಾಲಿಗ್ರಾಮ, ಪುತ್ತೂರು, ಮಡಿಕೇರಿ, ಸರಗೂರು, ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳ, ಮೂರ್ನಾಡು, ನಾಪೋಕ್ಲು, ವಿರಾಜಪೇಟೆಯಲ್ಲಿ ಮಳೆಯಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com