ಮಾರ್ಚ್ ಅಂತ್ಯಕ್ಕೆ 100 ಗ್ರಾಮ ನ್ಯಾಯಾಲಯಗಳ ಸ್ಥಾಪನೆ: ಕಾನೂನು ಸಚಿವ ಎಚ್.ಕೆ. ಪಾಟೀಲ್

2024ರ ಹಣಕಾಸು ವರ್ಷದ ಅಂತ್ಯ (ಮಾರ್ಚ್ ಅಂತ್ಯಕ್ಕೆ)ದೊಳಗೆ 100 ಗ್ರಾಮ ನ್ಯಾಯಾಲಯಗಳನ್ನು ಸರ್ಕಾರ ಸ್ಥಾಪಿಸಲಿದೆ ಎಂದು ಕರ್ನಾಟಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್‌ ಅವರು ಶನಿವಾರ ಹೇಳಿದರು.
ಕಾನೂನು ಸಚಿವ ಎಚ್.ಕೆ. ಪಾಟೀಲ್
ಕಾನೂನು ಸಚಿವ ಎಚ್.ಕೆ. ಪಾಟೀಲ್

ಬೆಂಗಳೂರು: 2024ರ ಹಣಕಾಸು ವರ್ಷದ ಅಂತ್ಯ (ಮಾರ್ಚ್ ಅಂತ್ಯಕ್ಕೆ)ದೊಳಗೆ 100 ಗ್ರಾಮ ನ್ಯಾಯಾಲಯಗಳನ್ನು ಸರ್ಕಾರ ಸ್ಥಾಪಿಸಲಿದೆ ಎಂದು ಕರ್ನಾಟಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್‌ ಅವರು ಶನಿವಾರ ಹೇಳಿದರು.

ಜಿಲ್ಲಾ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕೆ ಶನಿವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಪ್ರಸಕ್ತ ಹಣಕಾಸು ವರ್ಷದ ಅಂತ್ಯದೊಳಗೆ 100 ಗ್ರಾಮ ನ್ಯಾಯಾಲಯಗಳನ್ನು ಸರ್ಕಾರ ಸ್ಥಾಪಿಸಲಿದೆ. ಇದಕ್ಕೆ 2008ರಲ್ಲಿಯೇ ಯೋಜನೆ ಸಿದ್ಧಪಡಿಸಲಾಗಿತ್ತು. ಇಲ್ಲಿಯವರೆಗೆ ಕೇವಲ ಎರಡು ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. 15 ವರ್ಷಗಳಿಂದ ಪೂರ್ಣ ಪ್ರಮಾಣದ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸಲು ಸಾಧ್ಯವಾಗಿಲ್ಲ. ಗ್ರಾಮ ನ್ಯಾಯಾಲಯಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಸರ್ಕಾರ ಈಗಾಗಲೇ ಚರ್ಚೆ ನಡೆಸಿದೆ. ಗ್ರಾಮೀಣ ಭಾಗದ ಪ್ರಕರಣಗಳ ತ್ವರಿತ ವಿಲೇವಾರಿಗೆ ಈ ಕ್ರಮ ನೆರವಾಗಲಿದೆ ಎಂದು ಹೇಳಿದರು.

ಕಾನೂನು ಅನುಷ್ಠಾನ ವಿಳಂಬವಾದರೆ ಅದನ್ನು ಯಾರೂ ಪ್ರಶ್ನೆ ಮಾಡುತ್ತಿಲ್ಲ. ವಕೀಲರು ಹಾಗೂ‌ ಪತ್ರಕರ್ತರು ಈ ಕುರಿತು ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಬೇಕು. ನ್ಯಾಯಾಧೀಶರು ಕಕ್ಷಿದಾರರ ಗೌರವ ಕಾಪಾಡುವ ಬಗ್ಗೆ ಗಮನ ಹರಿಸಬೇಕು ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com