133 ಲ್ಯಾಪ್‌ಟಾಪ್, 19 ಫೋನ್, 4 ಟ್ಯಾಬ್ಲೆಟ್‌ ಕದ್ದಿದ್ದ ಕಂಪ್ಯೂಟರ್ ಸೈನ್ಸ್ ಪದವೀಧರನನ್ನು ಬಂಧಿಸಿದ ಪೊಲೀಸರು!

ನಗರದಲ್ಲಿ ಐಟಿ ಉದ್ಯೋಗಿಗಳ ಪೇಯಿಂಗ್ ಗೆಸ್ಟ್ ವಸತಿಗೃಹದಿಂದ 75 ಲಕ್ಷ ರೂಪಾಯಿ ಮೌಲ್ಯದ 133 ಲ್ಯಾಪ್‌ಟಾಪ್, 19 ಮೊಬೈಲ್ ಫೋನ್ ಮತ್ತು ನಾಲ್ಕು ಟ್ಯಾಬ್ಲೆಟ್‌ಗಳನ್ನು ಕದ್ದ ಆರೋಪದ ಮೇಲೆ ಕಂಪ್ಯೂಟರ್ ಸೈನ್ಸ್ ಪದವೀಧರನನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ತಿಳಿಸಿದ್ದಾರೆ.
ಕಳವು ಮಾಡಲಾಗಿದ್ದ 133 ಲ್ಯಾಪ್‌ಟಾಪ್, 19 ಮೊಬೈಲ್ ಫೋನ್ ಮತ್ತು ನಾಲ್ಕು ಟ್ಯಾಬ್ಲೆಟ್‌ ವಶ
ಕಳವು ಮಾಡಲಾಗಿದ್ದ 133 ಲ್ಯಾಪ್‌ಟಾಪ್, 19 ಮೊಬೈಲ್ ಫೋನ್ ಮತ್ತು ನಾಲ್ಕು ಟ್ಯಾಬ್ಲೆಟ್‌ ವಶ
Updated on

ಬೆಂಗಳೂರು: ನಗರದಲ್ಲಿ ಐಟಿ ಉದ್ಯೋಗಿಗಳ ಪೇಯಿಂಗ್ ಗೆಸ್ಟ್ ವಸತಿಗೃಹದಿಂದ 75 ಲಕ್ಷ ರೂಪಾಯಿ ಮೌಲ್ಯದ 133 ಲ್ಯಾಪ್‌ಟಾಪ್, 19 ಮೊಬೈಲ್ ಫೋನ್ ಮತ್ತು ನಾಲ್ಕು ಟ್ಯಾಬ್ಲೆಟ್‌ಗಳನ್ನು ಕದ್ದ ಆರೋಪದ ಮೇಲೆ ಕಂಪ್ಯೂಟರ್ ಸೈನ್ಸ್ ಪದವೀಧರನನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ತಿಳಿಸಿದ್ದಾರೆ.

ಈ ಹಿಂದೆ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಪೇಯಿಂಗ್ ಗೆಸ್ಟ್ ಮತ್ತು ಬ್ಯಾಚುಲರ್ ವಸತಿಗಳಿಗೆ ಭೇಟಿ ನೀಡಿ ಅಲ್ಲಿದ್ದ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್‌ಗಳನ್ನು ಕದಿಯುತ್ತಿದ್ದನು.

ಇದೇ ವೇಳೆ ಆರೋಪಿ ಕದ್ದ ಎಲೆಕ್ಟ್ರಾನಿಕ್ ವಸ್ತುಗಳನ್ನು ಪಡೆದು ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಲಾಗಿದೆ. ಸದ್ಯ ಮೂವರೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಕೇಂದ್ರ ವಿಭಾಗದಲ್ಲಿ ಸುಮಾರು ಎಂಟು ಪ್ರಕರಣಗಳು ಪತ್ತೆಯಾಗಿವೆ. ಆತ ಎಲ್ಲೆಲ್ಲಿ ಅಪರಾಧ ಎಸಗಿದ್ದಾನೆ ಎಂಬುದನ್ನು ಇತರ ಪೊಲೀಸ್ ಠಾಣೆಗಳಿಂದಲೂ ಪರಿಶೀಲಿಸುತ್ತಿದ್ದೇವೆ ಎಂದು ದಯಾನಂದ ತಿಳಿಸಿದ್ದಾರೆ.

ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗವು 11 ಸ್ಥಳಗಳಲ್ಲಿ ದಾಳಿ ನಡೆಸಿ 13 ಜನರನ್ನು ಬಂಧಿಸುವ ಮೂಲಕ ಪ್ರಮುಖ ಬೆಟ್ಟಿಂಗ್ ದಂಧೆಯನ್ನು ಭೇದಿಸಿದೆ ಎಂದು ಅವರು ಹೇಳಿದರು. ಈ ಸಂಬಂಧ ಪೊಲೀಸರು 11 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಅವರಿಂದ 10 ಲಕ್ಷ ರೂಪಾಯಿ ವಶಕ್ಕೆ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com